ತುಮಕೂರು

ಜನರ ಒಲವು ಜೆಡಿಎಸ್ ಪರ: ಸಣ್ಣಾರೆಡ್ಡಿ

Published On :

ಕ.ಪ್ರ.ವಾರ್ತೆ  ,   ಪಾವಗಡ  ,   ಏ.26
ಜನರ ಒಲವು ಜೆಡಿಎಸ್ ಪರ ಇದ್ದು ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಅವರು ಅತ್ಯಧಿಕ ಮತಗಳಿಂದ ಗೆಲ್ಲಲಿದ್ದಾರೆ ಎಂದು ಹಿರಿಯ ಮುಖಂಡ ಲಿಂಗದಹಳ್ಳಿ ಸಣ್ಣಾರೆಡ್ಡಿ ತಿಳಿಸಿದರು.
ಅವರು ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ಆನೇಕ ಮಂದಿ ಕಾರ್ಯಕರ್ತರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡು ಮಾತನಾಡುತ್ತಿದ್ದರು.
ಲಿಂಗದಹಳ್ಳಿ ವ್ಯಾಪ್ತಿಯ ದೊಡ್ಡೇನಹಳ್ಳಿ, ರಂಗಸಮುದ್ರ, ಹೊಟ್ಟೆಬಮ್ಮನಹಳ್ಳಿ, ಸಾಸಲಕುಂಟೆ, ಕಂಚಮ್ಮನಹಳ್ಳಿ ಕ್ಯಾತಗಾನಹಳ್ಳಿ ಸುತ್ತಮುತ್ತ ಗ್ರಾಮಗಳು ನಿರಂತರ ಜೆಡಿಎಸ್ ಭದ್ರಕೋಟೆಯಾಗಿದ್ದು ಆನೇಕ ವರ್ಷಗಳಿಂದ ಜಿಪಂ ಹಾಗೂ ತಾಪಂ ಸೇರಿದಂತೆ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್‌ಗೆ ಬಹುಮತಗಳು ಲಭಿಸಿವೆ ಎಂದರು.
ತಾಲೂಕಿನಾದ್ಯಂತ ದಲಿತರು, ರೆಡ್ಡಿ ಜನಾಂಗ ಸೇರಿದಂತೆ ಎಲ್ಲಾ ವರ್ಗದ ಮತದಾರರು ಬಹುತೇಕ ಜೆಡಿಎಸ್ ಪರವಾಗಿದ್ದು ಪಕ್ಷದ ಅಭ್ಯರ್ಥಿ ಕೆ.ಎಂ.ತಿಮ್ಮರಾಯಪ್ಪ ಅವರ ವ್ಯಕ್ತಿತ್ವ ಹಾಗೂ ಪಕ್ಷದ ಮುಖಂಡರ ಸೇವೆ ಹಿನ್ನಲೆಯಲ್ಲಿ ಕಾಂಗ್ರೆಸ್, ಬಿಜೆಪಿಯಲ್ಲಿದ್ದ ಈ ಭಾಗದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದಾಗಿ ತಿಳಿಸಿದರು.
ಸೇರ್ಪಡೆಯಾದವರಿಗೆ ಕೃತಜ್ಞತೆ ಸಲ್ಲಿಸಿ ಜೆಡಿಎಸ್ ಬೆಂಬಲಿಸಿ ಅಧಿಕಾರಕ್ಕೆ ತನ್ನಿ ಎಂದರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಪಕ್ಷದ ತಾ.ಅಧ್ಯಕ್ಷ ಎನ್.ತಿಮ್ಮಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಗೋವಿಂದಬಾಬು ಮುಂತಾದವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಮುಖಂಡ ಎಲ್.ಎಸ್. ನರಸರೆಡ್ಡಿ, ಕೆ.ವಿ.ಗಿರಿರಾಜ್, ವಿ.ಚಿಂತಲರೆಡ್ಡಿ, ಆದಿನಾರಾಯಣರೆಡ್ಡಿ, ಕ್ಯಾತಗಾನಹಳ್ಳಿ, ಹನುಮಪ್ಪ, ತಿಪ್ಪೇಸ್ವಾಮಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.