ತುಮಕೂರು

ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕಾರ

Published On :

ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾ.ಪಂಗೆ ಸೇರಿರುವ ಶಕುನಗಿರಿಗೊಲ್ಲರಹಟ್ಟಿಯಲ್ಲಿ ಕಳೆದ 6 ತಿಂಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೀರಿಗಾಗಿ ಹಾಹಾಕಾರ ಉಂಟಾಗಿದೆ. ಆದ್ದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಇತ್ತ ಗಮನಹರಿಸಿ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸದಿದ್ದರೆ ಮೇ 5ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ತಿಳಿಸಿದ್ದಾರೆ.
ಕಡು ಬೇಸಿಗೆಯಾದ್ದರಿಂದ ಗ್ರಾಮದಲ್ಲಿರುವ 600 ಅಡಿಯ 2 ಕೊಳವೆ ಬಾವಿಗಳಲ್ಲೂ ನೀರಿಲ್ಲದ ಪರಿಣಾಮ ಮಹಿಳೆಯರು ಮತ್ತು ಮಕ್ಕಳು 2-3 ಕಿ.ಲೋ ಮೀಟರ್ ನಡೆದು ಹೊಗಿ ಪಕ್ಕದ ತೋಟದಲ್ಲಿ ಮಾಲೀಕರನ್ನು ಕಾಡಿ ಬೇಡಿ ನೀರು ತರುವ ಸ್ಥಿತಿ ನಿರ್ಮಾಣವಾಗಿದೆ. ಜೊತೆಗೆ ಈ ಭಾಗದಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದ್ದು, ಜಾನುವಾರುಗಳು ನೀರು ಮೇವಿಲ್ಲದೆ ಸೊರಗುತ್ತಿವೆ. ಈ ಬಗ್ಗೆ ಹಲವು ಬಾರಿ ಗ್ರಾ.ಪಂ ಮತ್ತು ತಾಲೂಕು ಆಡಳಿತಕ್ಕೆ ಮನವಿ ನೀಡಿದರೂ ಸಹ ಏನೂ ಪ್ರಯೋಜನವಾಗಿಲ್ಲ.  ಮೇ 1ರೊಳಗೆ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟಿಸುವುದಲ್ಲದೆ,  ಮೇ 5ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲಾಗುವುದೆಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.