ತುಮಕೂರು

ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ವಿಫಲ

Published On :

ಪಾವಗಡ: ಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಭಾನುವಾರ ಪಟ್ಟಣಕ್ಕೆ ನಿಗದಿತ ಅವಧಿಗಿಂತ 1 ಗಂಟೆ ತಡವಾಗಿ ಆಗಮಿಸಿದ ಪ್ರವಾಸೋದ್ಯಮ ಸಚಿವ ಚಿರಂಜೀವಿ ವೇದಿಕೆ ಆಗಮಿಸುತ್ತಿದ್ದಂತೆ  ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಭದ್ರತೆ ವೈಫಲ್ಯದಿಂದ ಕೆಲ ಸಮಯ ಗೊಂದಲ ನಿರ್ಮಾಣವಾಯಿತು.
ಚಿರಂಜೀವಿ ಅಭಿಮಾನಿಗಳ ಸಂಖ್ಯೆ ಇಲ್ಲಿ ಭಾರೀ ಸಂಖ್ಯೆಯಲ್ಲಿದ್ದು ಅವರ ಆಗಮನ ಹಿನ್ನೆಲೆಯಲ್ಲಿ ಸುಮಾರು 30 ಸಾವಿರಕ್ಕಿಂತ ಹೆಚ್ಚಿನ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ಸೇರಿದ್ದರು. ಮಾರಮ್ಮನ ಗುಡಿ ಮೈದಾನದಲ್ಲಿ ಸಿದ್ಧಪಡಿಸಿದ ವೇದಿಕೆ ಅತಿ ಚಿಕ್ಕದಾಗಿ ನಿರ್ಮಿಸಿದ್ದ ಕಾರಣ ವೇದಿಕೆಯಲ್ಲಿ ಅವರ ಜೊತೆ ಆಗಮಿಸಿದ್ದ ಅತಿಥಿಗಳಿಗೆ ಜಾಗವಿಲ್ಲದೇ ಪರದಾಟ ಶುರುವಾಗಿ ಕಾರ್ಯಕರ್ತರನ್ನು ನಿಯಂತ್ರಿಸುವಲ್ಲಿ ಪೊಲೀಸರು ಹರಸಾಹಸಪಟ್ಟರು.
ಸಚಿವ ಚಿರಂಜೀವಿ ವೇದಿಕೆ ಪ್ರವೇಶಿಸುತ್ತಿದ್ದಂತೆ ವೇದಿಕೆ ಮುಂಭಾಗದಲ್ಲಿ ನಿರ್ಮಿಸಿದ್ದ ರಕ್ಷಣಾ ಗೋಡೆ ಕಿತ್ತ ಅಭಿಮಾನಿಗಳು  ಮುತ್ತಿಗೆ ಹಾಕಿ ಚಿರಂಜೀವಿಗೆ ಜೈಕಾರ ಕೂಗಿದರು. ಇದೇ ಸಂದರ್ಭದಲ್ಲಿ ಧ್ವನಿವರ್ಧಕ ವ್ಯವಸ್ಥೆ ಸರಿ ಇಲ್ಲದ ಕಾರಣ ಅಲ್ಲಲ್ಲಿ ಭಾಷಣ ಕೇಳಲು ನಿಂತಿದ್ದ ಅಭಿಮಾನಿಗಳಿಗೆ ನಿರಾಶೆ ಆಯಿತು. ಕಾರ್ಯಕ್ರಮದಲ್ಲಿ ಕಿಕ್ಕಿರಿದ ಸಾವಿರಾರು ಅಭಿಮಾನಿಗಳನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲರಾದ ಕಾರಣ ಕಾರ್ಯಕ್ರಮ ಅವ್ಯವಸ್ಥೆಯಿಂದ ಕೂಡಿತ್ತು.
ಕಾರ್ಯಕ್ರಮ ಮುಗಿದ ನಂತರ ಪಟ್ಟಣದ ಪತಂಜಲಿ ನಗರದಲ್ಲಿರುವ ಮಾಜಿ ಶಾಸಕ ಸೋಮ್ಲಾನಾಯಕ್ ಮನೆಗೆ ತೆರಳಿದ ಚಿರಂಜೀವಿ, ಸಚಿವ ರಘುವೀರರೆಡ್ಡಿ  ಮನೆಯಲ್ಲಿ ಚಹ ಕೂಟ ನಡೆಸಿ ತಾಲೂಕಿನ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.