ಸಿಇಟಿಗೆ 11 ಪರೀಕ್ಷಾ ಕೇಂದ್ರಗಳು, 5752 ವಿದ್ಯಾರ್ಥಿಗಳು: ಜಿಲ್ಲಾಧಿಕಾರಿ
ಕ.ಪ್ರ.ವಾರ್ತೆ , ತುಮಕೂರು , ಏ.28
ಜಿಲ್ಲೆಯಲ್ಲಿ ಮೇ 1 ಮತ್ತು 2 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ 5752 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಅನುರಾಗ್ ತಿವಾರಿ ತಿಳಿಸಿದ್ದಾರೆ.
ತುಮಕೂರಿನ ಬಿ.ಎಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್.ಐ.ಟಿ. ಬಡಾವಣೆಯ ವಿದ್ಯಾವಾಹಿನಿ ಪದವಿಪೂರ್ವ ಕಾಲೇಜು, ಹೊರಪೇಟೆಯ ಸರ್ವೋದಯ ಪದವಿಪೂರ್ವ ಕಾಲೇಜು, ಎಸ್.ಐ.ಟಿ. ಬಡಾವಣೆಯ ವಾಸವಿ ಕಾಲೇಜು, ಅಶೋಕ ರಸ್ತೆಯ ಎಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜು, ಬಿ.ಎಚ್.ರಸ್ತೆಯ ಸಿದ್ದಗಂಗಾ ಬಾಲಕರ ಪದವಿಪೂರ್ವ ಕಾಲೇಜು, ಸಿದ್ದಗಂಗಾ ಬಾಲಕಿಯರ ಪ.ಪೂ. ಕಾಲೇಜು, ಸಿ.ಎಸ್.ಐ. ಬಡಾವಣೆಯ ಬಿಷಪ್ ಸಾರ್ಜೆಟ್ ಪ.ಪೂ. ಕಾಲೇಜು, ಸಿದ್ದಗಂಗಾ ಪ.ಪೂ. ಕಾಲೇಜು, ತಿಪಟೂರಿನ ಬಿ.ಎಂ. ರಸ್ತೆಯ ಸರ್ಕಾರಿ ಬಾಲಕರ ಪ.ಪೂ. ಕಾಲೇಜು, ತಿಪಟೂರಿನ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಮೂವರು ಅಧಿಕಾರಿಗಳುಳ್ಳ ಎರಡು ತಂಡವನ್ನು ರಚಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಪ್ರಾಂಶುಪಾಲರನ್ನು ಪಾಲಕರನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಎ ಗುಂಪಿನ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಿಷೇಧ: ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡಲು ಸಹಕರಿಸುವ ಅಥವಾ ನಕಲು ಮಾಡಿ ಸಿಕ್ಕಿಬಿದ್ದ ಅಭ್ಯರ್ಥಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿಗಳು ಚೀಟಿ, ಮೊಬೈಲ್, ಕ್ಯಾಲ್ಕ್ಯುಲೇಟರ್ ಇತ್ಯಾದಿ ಉಪಕರಣಗಳನ್ನು ಪರೀಕ್ಷಾ ಕೇಂದ್ರಗಳಿಗೆ ತರದಂತೆ ನಿರ್ಬಂಧ ವಿಧಿಸಲಾಗುವುದು ಮತ್ತು ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

