ಸೋಲಿನ ಭೀತಿಯಿಂದ ನನ್ನ ವಿರುದ್ಧ ಕುತಂತ್ರ: ಗೌರಿಶಂಕರ್ ಆರೋಪ
ತುಮಕೂರು: ಸೋಲಿನ ಭೀತಿ ಎದುರಿಸುತ್ತಿರುವವರು ನನ್ನ ವಿರುದ್ಧ ಇಲ್ಲಸಲ್ಲದ ಕುತಂತ್ರ ನಡೆಸುತ್ತಿದ್ದಾರೆ. ಇದನ್ನು ಬಿಟ್ಟು ಜನರ ಬಳಿ ತೆರಳಿ ಓಟು ಕೇಳಿ ತಮ್ಮ ಶಕ್ತಿ ಪ್ರದರ್ಶಿಸುವಂತೆ ಜೆಡಿಎಸ್ ಅಭ್ಯರ್ಥಿ ಡಿ.ಸಿ. ಗೌರಿಶಂಕರ್ ಸವಾಲು ಹಾಕಿದರು.
ಅವರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೆಸರುಮಡು ಗ್ರಾಮದಲ್ಲಿರುವ ದರ್ಗಾಕ್ಕೆ ಭೇಟಿ ನೀಡಿ ಮುಸ್ಲಿಂ ಭಾಂದವರೊಂದಿಗೆ ಪ್ರಾರ್ಥನೆ ಕೈಗೊಂಡ ಬಳಿಕ ಗ್ರಾಮಸ್ಥರಲ್ಲಿ ಮತಯಾಚಿಸಿ ಮಾತನಾಡಿದರು.
ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಏಳಿಗೆ ಸಹಿಸದ ಕೆಲ ವಿರೋಧಿ ಗುಂಪು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಕರಪತ್ರ ಹಂಚಿ ಜನತೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ತರಬೇಕೆಂಬುದು ಇಲ್ಲಿನ ಜನರಿಗೆ ಚೆನ್ನಾಗಿ ಅರಿವಿದೆ. ಇನ್ನು ಮುಂದಾದರೂ ಈ ತೆರನಾದ ಕೆಲಸ ಮಾಡುವುದನ್ನು ಬಿಟ್ಟು ನ್ಯಾಯಯುತವಾಗಿ ವರ್ತಿಬೇಕೆಂದು ಕಿವಿಮಾತು ಹೇಳಿದರು. ಶ್ರೀರಂಗಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಹೆಸರಿನಲ್ಲಿ ಸ್ಥಾಪಿಸಲುದ್ದೇಶಿಸಿದ್ದ ವಿ.ವಿ.ಗೆ ಅನುಮತಿ ನೀಡದೆ ವಿರೋಧಿಸಿದ್ದು ಬಿಜೆಪಿ ಸರ್ಕಾರದ ಹೆಗ್ಗಳಿಕೆ ಎಂದು ವ್ಯಂಗ್ಯವಾಡಿದರು.
ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ, ಸಂಧ್ಯಾಸುರಕ್ಷಾ ಯೋಜನೆ, ವಿಧವಾವೇತನ, ವೃದ್ಧಾಪ್ಯವೇತನ ಜಾರಿಗೊಳಿಸಿದ್ದು ಕುಮಾರಸ್ವಾಮಿ ನೇತೃತ್ವದ ಸರ್ಕಾರ. ಆದರೆ ಜನಪರವಾದ ಈ ಯೋಜನೆಗಳನ್ನು ಅನುಷ್ಠಾನ ಗೊಳಿಸುವಲ್ಲಿ ಬಿಜೆಪಿ ಸರ್ಕಾರ ಅಸಮರ್ಥವಾಗಿದೆ ಎಂದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ರಿಯಾಜ್, ಭೈರೇಗೌಡ, ಜಫ್ರುಲ್ಲಾಖಾನ್ ಸೇರಿದಂತೆ ಹಲವಾರು ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

