ತುಮಕೂರು

ಹುಳಿಯಾರಿಗೆ ಇಂದು ಸಿಎಂ ಶೆಟ್ಟರ್

Published On :

ಹುಳಿಯಾರು: ಚಿಕ್ಕನಾಯಕನಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಕಿರಣ್‌ಕುಮಾರ್ ಪರ ಚುನಾವಣಾ ಪ್ರಚಾರಕ್ಕಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಏ.30 ಮಂಗಳವಾರ ಬೆಳಿಗ್ಗೆ 10 ಗಂಟೆ  ಹುಳಿಯಾರಿಗೆ  ಆಗಮಿಸಲಿದ್ದು, ಪಟ್ಟಣದ ಬಸ್ ನಿಲ್ದಾಣದಿಂದ ಬಿ.ಹೆಚ್.ರಸ್ತೆ ಮೂಲಕ ಮೆರವಣಿಗೆಯಲ್ಲಿ ಸಾಗಿ ನಂತರ ಎಪಿಎಂಸಿ ಸಮೀಪದ ಪೆಟ್ರೋಲ್ ಬಂಕ್ ಬಳಿಯ ಮೈದಾನದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದೆ.
ಮಧುಗಿರಿಗೆ ಇಂದು ದೇವೇಗೌಡ
ಮಧುಗಿರಿ: ಮಧುಗಿರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ವಿ. ವೀರಭದ್ರಯ್ಯ ಅವರ ಪರವಾಗಿ ಚುನಾವಣೆ ಪ್ರಚಾರ ಮಾಡಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಏ.30 ರ ಮಂಗಳವಾರ ಸಂಜೆ 5 ಗಂಟೆಗೆ  ಮಧುಗಿರಿಗೆ  ಬರಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಂಭತ್ತನಹಳ್ಳಿ ರಘು ತಿಳಿಸಿದ್ದಾರೆ. ನಾಳೆ ಮಧುಗಿರಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕೆ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ಚಿನ  ಸಂಖ್ಯೆಯಲ್ಲಿ  ಭಾಗವಹಿಸಿಸುವಂತೆ ಕಂಭತ್ತನಹಳ್ಳಿ ರಘು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.