ತುಮಕೂರು

ಇಂದು ಶಿರಾಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

Published On :

ಶಿರಾ: ಶಿರಾ ವಿಧಾನಸಭಾ ಕ್ಷೇತ್ರ ಚುನಾವಣೆಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು  ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮಂಗಳವಾರ ನಗರಕ್ಕೆ ಆಗಮಿಸಲಿದ್ದಾರೆ ಎಂದು ನಗರ ಘಟಕದ ಕಾರ್ಯದರ್ಶಿ ಎಸ್.ಪಿ. ಕೃಷ್ಣಮೂರ್ತಿ, ಎಸ್.ಟಿ.ಮೋರ್ಚಾ ಅಧ್ಯಕ್ಷ ರಂಗನಾಥ್, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ನಡೆಯುವ ಈ ಬೃಹತ್ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಅವರು ಬಹಿರಂಗ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದು.  ಉಪ ಮುಖ್ಯಮಂತ್ರಿ ಆರ್.ಅಶೋಕ್, ಬಿಜೆಪಿ ಅಭ್ಯರ್ಥಿ ಬಿ.ಕೆ.ಮಂಜುನಾಥ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಪ್ರಸಾದ್ ಮತ್ತಿತರರು ಹಾಜರಿರುವರು. ಸಮಾವೇಶಕ್ಕೆ ಮುನ್ನ ಪಟ್ಟಣದ ಮಲ್ಲಿಕ್ ರಹಾನ್ ದರ್ಗಾ ಸರ್ಕಲ್‌ನಿಂದ ಬೃಹತ್ ಬೈಕ್ ರ್ಯಾಲಿಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.