ತುಮಕೂರು

ವಿದ್ಯುತ್ ಸಮಸ್ಯೆ ಶಾಸಕರು ವಿಫಲ: ಆರೋಪ

Published On :

ಶಿರಾ: ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆಯಿಂದ ಬೇಸತ್ತ ರೈತರ ಬಗ್ಗೆ ಕಾಳಜಿ ವಹಿಸದ ಶಾಸಕರು ಕನಿಷ್ಠ ಸೌಜನ್ಯಕ್ಕಾದರೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆ ಬಗೆ ಹರಿಸದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ಬಿ.ಸತ್ಯನಾರಾಯಣ ಟೀಕಿಸಿದರು. ಅವರು ತಾಲೂಕಿನ ಬರಗೂರಿನಲ್ಲಿ ಅಬ್ಬರ ಪ್ರಚಾರ ಕೈಗೊಂಡು ಮಾತನಾಡಿ ಹುಲಿಕುಂಟೆ ಅತಿ ದೊಡ್ಡ ಹೋಬಳಿ ಕೇಂದ್ರವಾಗಿದ್ದು, ಇಲ್ಲಿರುವ ನಾಡ ಕಚೇರಿಗೆ ಸ್ವಂತ ಕಟ್ಟಡ ಒದಗಿಸಿಲ್ಲ. 850 ಕೋಟಿ ರು. ಅನುದಾನ ಖರ್ಚು ಮಾಡಿ ಅಭಿವೃದ್ಧಿ ಮಾಡಿದ್ದೇನೆ ಎನ್ನುವ ಶಾಸಕರು ಗ್ರಾಮಾಂತರ ಪ್ರದೇಶದ ರಸ್ತೆ ದುಃಸ್ಥಿತಿಯನ್ನು ಕಂಡು ಜನ ಶಾಪ ಹಾಕುತ್ತಿದ್ದಾರೆ. ಬರಿ ಪುಸ್ತಕದಲ್ಲಿ ಮಾತ್ರ ಕಾಮಗಾರಿ ಆಗಿದೆ ಎನ್ನುವ ಶಾಸಕರ ಮಾತನ್ನು ನಂಬುವಷ್ಟು ದಡ್ಡರಲ್ಲ. ತಾಲೂಕಿನ ಜನ ಈ ಭಾರಿ ಬದಲಾವಣೆ ಬಯಸಿದ್ದು ಜೆಡಿಎಸ್ ಪರ ಒಲವು ಹೊಂದಿದ್ದು ನನ್ನ ಗೆಲವು ಖಚಿತ ಎಂದರು.  ಜಿ.ಪಂ. ಮಾಜಿ ಉಪಾಧ್ಯಕ್ಷ ಗಡಾರಿ ಹನುಮಂತಪ್ಪ, ಮಾತನಾಡಿ ಈ ಹಿಂದೆ ಬಿ.ಸತ್ಯನಾರಾಯಣ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಜೆಡಿಎಸ್ ಗೆಲುವಿಗೆ ಕಾರಣವಾಗಲಿದೆ ಎಂದರು. ರಾಜ್ಯ ಜೆಡಿಎಸ್ ಕಾರ್ಯಕಾರಿ ಸಮಿತಿ ಸದಸ್ಯ ಬರಗೂರು ಶಿವಕುಮಾರ್, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ನಿಡಗಟ್ಟೆ ಚಂದ್ರಶೇಖರ್, ಕೆ.ಮಂಜುನಾಥ್, ತಾಲೂಕು ಜೆಡಿಎಸ್ ಅಧ್ಯಕ್ಷ ದೊಡ್ಡೇಗೌಡ ಮತ್ತಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.