ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ತಿಪಟೂರು: ತಾಲೂಕಿನ ಕರಡಿ ಗ್ರಾಮ ಪಂಚಾಯಿತಿಗೆ ಸೇರಿರುವ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು,ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಪಂಗೆ ಬೀಗ ಜಡಿದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ಮಂಗಳವಾರ ನಡೆಯಿತು. ಬೊಮ್ಮೇನಹಳ್ಳಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಮನೆಗಳಿದ್ದು, ಕಳೆದ 3 ತಿಂಗಳಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಗ್ರಾಮದಲ್ಲಿ 3 ಕೊಳವೆ ಬಾವಿಗಳಿದ್ದು ಯಾವುದರಲ್ಲೂ ನೀರಿಲ್ಲದ ಪರಿಣಾಮ ಜನ-ಜಾನುವಾರುಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಈ ಬಗ್ಗೆ ಗ್ರಾಪಂ ಮತ್ತು ತಾಪಂಗೆ ಹಲವಾರು ಬಾರಿ ದೂರು ನೀಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾರ್ಯನಿರ್ವಾಹಣಾಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಉಪಾಧ್ಯಕ್ಷರು ಮತ್ತು ಸದಸ್ಯರು ಒಂದು ವಾರದೊಳಗಾಗಿ ನೀರಿನ ಸಮಸ್ಯೆ ಬಗೆಹರಿಸಲಾಗುವುದೆಂದು ಭರವಸೆ ನೀಡಿದರು.ಪ್ರತಿಭಟನೆಯಲ್ಲಿ ಕರ್ನಾಟಕ ಮಾತೃಸೇನೆ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ರಾಜಣ್ಣ ಸೇರಿದಂತೆ ಗ್ರಾಮದ ಮಹಿಳೆಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

