ತುಮಕೂರು

ಡಾ.ಅಂಬರೀಷ್ ಪರ ಪ್ರಚಾರಕ್ಕೆ ಬೆಳ್ಳಿತೆರೆ, ಕಿರುತೆರೆ ಕಲಾವಿದರ ದಂಡು...

Published On :

ಮಂಡ್ಯ: ಅಂಬರೀಷ್ ಪರ ಪ್ರಚಾರಕ್ಕೆ ಸಿನಿಮಾ ಹಾಗೂ ಕಿರುತೆರೆಯ ತಾರಾ ದಂಡೆ ಮಂಡ್ಯಕ್ಕೆ ಆಗಮಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ.
ಕಿರುತೆರೆಯ ನಟಿಯರು ಹಳ್ಳಿಗಳಿಗೆ ತೆರಳಿ ಮನೆ ಮನೆಯಲ್ಲಿ ಅಂಬಿ ಪರ ಮತಯಾಚನೆ ಮಾಡಿದರು. ಕೆರಗೋಡು ಹೋಬಳಿಯಲ್ಲಿ ದರ್ಶನ್, ಪ್ರೇಮ್, ರವಿಶಂಕರ್, ಯಶ್ ಇತರರು ಪ್ರಚಾರ ನಡೆಸಿದರು.  ನಗರದ ವಿವಿಧ ಬಡಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಬರೀಷ್ ಮಂಗಳವಾರ ಪ್ರಚಾರ ನಡೆಸಿದರು. ನಗರದ 16ನೇ ವಾರ್ಡ್ನ ಹೊಸಹಳ್ಳಿ ಬಿಸಿಲು ಮಾರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿ  ಚುನಾವಣಾ ಪ್ರಚಾರ ಆರಂಭಿಸಿದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಜಿಲ್ಲೆ ಬಗ್ಗೆ ಅಭಿಮಾನ, ಸ್ವಾಭಿಮಾನವಿದೆ. ಈ ಚುನಾವಣೆಯಲ್ಲಿ ಆಯ್ಕೆಯಾದರೆ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು. ಬುಧವಾರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಗರದ ಸರ್ಎಂವಿ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.
ನಗರಸಭೆ ಸದಸ್ಯರಾದ ಹೊಸಹಳ್ಳಿ ಬೋರೇಗೌಡ, ಚಂದ್ರಕಲಾ ಶಿವರಾಮ್, ರವಿಶಂಕರೇಗೌಡ, ಸೋಮಶೇಖರ್, ಸುಜಾತಮಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.