ತುಮಕೂರು

'ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ'

Published On :

ಕ.ಪ್ರ.ವಾರ್ತೆ   ಕೊರಟಗೆರೆ   ಏ. 30
ಜೆಡಿಎಸ್ ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡಿಲ್ಲ. ಜಾತ್ಯತೀತವಾಗಿ ಸಾಮಾಜಿಕ ನ್ಯಾಯವನ್ನು ನೀಡಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.
ಅವರು ಮಂಗಳವಾರ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿ ಜಿಲ್ಲೆಯಲ್ಲಿ ಕುರಬ ಸಮುದಾಯದ ಬಂಬಲಕ್ಕೆ ಜೆಡಿಎಸ್ ನಿಂತಿದೆ. ಇಬ್ಬರಿಗೆ ಟಿಕೆಟ್ ಹಾಗೂ ಜಿಲ್ಲಾ ಅಧ್ಯಕ್ಷರು ಸಹ ಕುರುಬ ಸಮುದಾಯದವರೇ ಎಂದರು. ಕಾಂಗ್ರೆಸ್ನ ಹಲವಾರು ನಾಯಕರು ನಾನು ಮಖ್ಯಮಂತ್ರಿಯಾಗುತ್ತೇನೆ ಎಂದು  ಕನಸು ಕಾಣುತ್ತಿದ್ದಾರೆ, ಇದು ಕನಸಾಗೇ ಉಳಿಯುತ್ತದೆ ಎಂದರು. ಕೊರಟಗರೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾವುದೇ ಸಮುದಾಯಕ್ಕೆ ಲೋಪ ಮಾಡದೇ 13 ವರ್ಷಗಳ ಕಾಲ ಜಿ.ಪಂ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಕ್ಷೇತ್ರದ ಜಿ.ಪಂ, ತಾ.ಪಂ, ಗ್ರಾ.ಪಂ ಸದಸ್ಯರೆಲ್ಲರೂ ಒಗ್ಗೂಡಿ ಕೆಲಸ ಮಾಡಿ ಜೆಡಿಎಸ್ ಅಭ್ಯರ್ಥಿಯ ಗೆಲುವಿಗೆ ಗುರುತರ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಮಾಜಿ ಶಾಸಕ ಎ. ಕೃಷ್ಣಪ್ಪ, ಅಭ್ಯರ್ಥಿ ಪಿ.ಆರ್. ಸುಧಾಕರ್ಲಾಲ್, ಜಿ.ಪಂ ಅಧ್ಯಕ್ಷೆ ಪ್ರೇಮಾ, ಸದಸ್ಯೆ ದಾಕ್ಷಾಯಿಣಿ, ತಾ.ಪಂ ಅಧ್ಯಕ್ಷೆ ಅನಿತಾ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಾ. ಹುಲಿನಾಯ್ಕರ್, ತಾಲೂಕು ಅಧ್ಯಕ್ಷ ರಂಗಮುತ್ತಯ್ಯ, ಕಾರ್ಯಾಧ್ಯಕ್ಷ ನರಸಿಂಹರಾಜು, ಮುಖಂಡರಾದ ಎಲ್. ರಾಜಣ್ಣ, ಮಹಾಲಿಂಗಪ್ಪ, ಅಶ್ವಥ್, ಲಕ್ಷ್ಮಣ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.