ತುಮಕೂರು

ಎ.ಜೆ. ಸದಾಶಿವ ಆಯೋಗದ ವರದಿ ವಿರೋಧಿ ಅಭ್ಯರ್ಥಿಗಳಿಗೆ ಮತ ಬೇಡ

Published On :

ದೇವನಹಳ್ಳಿ:  ನ್ಯಾಯಮೂರ್ತಿ ಎ.ಜೆ.ಸದಾಶಿವ ವರದಿಯನ್ನು ವಿರೋಧಿಸಿದ ಶಾಸಕರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟಸ್ವಾಮಿ ಹಾಗೂ ಜೆಡಿಎಸ್ನಿಂದ ಬಿಜೆಪಿಗೆ ಹಾರಿದ ಮಾಜಿ ಶಾಸಕ ಜಿ.ಚಂದ್ರಣ್ಣಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರರು ಮತನೀಡದಂತೆ ದೇವನಹಳ್ಳಿ ತಾಲೂಕು ದಲಿತ ಸಂಘಟನೆಗಳ ಮುಖಂಡರಾದ ಬುಳ್ಳಹಳ್ಳಿರಾಜಪ್ಪ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.  
   ರಾಜ್ಯದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟರಲ್ಲಿ ಹೊಲೆಯ ಮತ್ತು ಮಾದಿಗರಿಗೆ ಸಿಗಬೇಕಾದ ಸಾಮಾಜಿಕ ನ್ಯಾಯದ ಕನಸು ಕನಸಾಗಿಯೇ ಉಳಿದಿದೆ ಎಂದು ರಾಜಪ್ಪ ತಿಳಿಸಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಶ ಜಾತಿಯ ಪರಿಶಿಷ್ಟರಲ್ಲಿ ಬೋವಿ, ಮತ್ತು ಕೊರಚ ಸಮುದಾಯಕ್ಕೆ ಸೇರಿದ ಶೇ.3 ಹಾಗೂ ಶೇ.12 ರಷ್ಟು ಅಸ್ಪೃಷ್ಯರ ಜಾತಿಗೆ ಸೇರಿದವರಾಗಿದ್ದು ರಾಜಕೀಯ ಅಸಮಾನತೆ ಇದ್ದು ಹೊಲೆಯ ಮಾದಿಗರಿಗೆ ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನ್ಯಾಯವಾಗಿದೆ ಎಂದರು. ಶಾಸಕ ವೆಂಕಟಸ್ವಾಮಿ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಬೋವಿ ಜನಾಂಗದ ಸಮ್ಮೇಳನದಲ್ಲಿ ಯಾವುದೇ ಕಾರಣಕ್ಕೂ ಸದಾಶಿವ ಆಯೋಗದ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ ಎಂಬ ಹೇಳಿಕೆ ಪರಿಶಿಷ್ಟ ಜನಾಂಗಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಮಾದಿಗ ಹೋರಾಟ ಸಮಿತಿ ಅಧ್ಯಕ್ಷ ಜಿ.ಮಾರಪ್ಪ  ತಿಳಿಸಿ  ಜಿ.ಚಂದ್ರಣ್ಣ ಕಳೆದ 20 ವರ್ಷಗಳಿಂದ ಜೆಡಿಎಸ್ನಿಂದ ನಾಲ್ಕು ಬಾರಿ ಟಿಕೆಟ್ ಪಡೆದು ಎರಡು ಬಾರಿ ಶಾಸಕರಾಗಿ ಜಿಲ್ಲಾ ಅಧ್ಯಕ್ಷರಾಗಿ, ನಿಗಮ ಮಂಡಳಿ ಅಧ್ಯಕ್ಷರಾಗಿ ಎಲ್ಲ ರೀತಿಯ ಅಧಿಕಾರ ಅನುಭವಿಸಿ ಶಾಸಕ ಸ್ಥಾನ ಬೇರೆಯವರಿಗೆ ಸಿಗಬಾರದು ಎಂದು ಭಾವಿಸಿದ್ದರು. ಆದರೆ ಇವರಿಗೆ ಜೆಡಿಎಸ್ ಟಿಕೆಟ್ ಸಿಗದೇ ಇದ್ದಾಗ ಸ್ಥಳೀಯ ಬಿಜೆಪಿ ಮುಖಂಡರನ್ನು ಗಣನೆಗೆ ತೆಗೆದುಕೊಳ್ಳದೆ ಕೂಡಲೇ ರಾತ್ರೋರಾತ್ರಿ ಬಿಜೆಪಿಗೆ ಸೇರ್ಪಡೆಯಾಗಿ  ಈಗ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇಂತಹವರಿಗೆ ಮತದಾರರು ಮತ ಚಲಾಯಿಸಬಾರದು ಎಂದು ತಿಳಿಸಿದರು.
   ಜೆಡಿಎಸ್ ಅಭ್ಯರ್ಥಿ ಸರಳ ಸಜ್ಜನಿಕೆಯ ಪಿಳ್ಳಮುನಿಶಾಮಪ್ಪರವರಿಗೆ ಕರ್ನಾಟಕ ಮಾದಿಗ ದಂಡೋರ ಮತ್ತು ದಲಿತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಯುವಕರು ಮತ್ತು ಬುದ್ಧಿ ಜೀವಿಗಳು ಸಹ ಪಿಳ್ಳಮುನಿಶಾಮಪ್ಪರವರಿಗೆ ಬೆಂಬಲ ನೀಡಿದ್ದಾರೆ ಎಂದು ರಾಜಪ್ಪ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.