ತೀವ್ರಗೊಂಡಿದೆ ಪ್ರಚಾರದ ಭರಾಟೆ
ಕ.ಪ್ರ.ವಾರ್ತೆ ತುಮಕೂರು ಏ. 30
ಮಹಾಸಮರಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಬೆನ್ನಲ್ಲೇ ತುಮಕೂರು ನಗರ ಸೇರಿದಂತೆ ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ತೀವ್ರಗೊಂಡಿದೆ.
ಒಂದೆಡೆ ಸ್ಟಾರ್ ಕ್ಯಾಂಪೇನರ್ಗಳು ಬಂದು ಹೋಗುತ್ತಿದ್ದರೆ ಮತ್ತೊಂದೆಡೆ ರೋಡ್ ಶೋಗಳು ತೀವ್ರಗೊಂಡಿದೆ. ಹೀಗಾಗಿ ಚುನಾವಣಾ ಕಣ ರಂಗೇರತೊಡಗಿದೆ.
ಮೊನ್ನೆ ಮೊನ್ನೆ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ತುಮಕೂರಿಗೆ ಆಗಮಿಸಿ ಎಲ್ಲಾ 11 ವಿಧಾನಸಭಾ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ್ದರು. ಹಾಗೆಯೇ ಜಿಲ್ಲೆಗೆ ಜೆಡಿಎಸ್ನಿಂದ ದೇವೇಗೌಡ, ಕುಮಾರಸ್ವಾಮಿ ಬಂದು ಹೋಗಿದ್ದಾರೆ. ಕೆಜೆಪಿಯಿಂದ ಸ್ವತಃ ಯಡಿಯೂರಪ್ಪ ಬಂದು ಚುನಾವಣಾ ಪ್ರಚಾರ ನಡೆಸಿ ಹೋಗಿದ್ದಾರೆ. ಇನ್ನು ಬಿಜೆಪಿಯಲ್ಲಿ ಸ್ವತಃ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಂದು ಪ್ರಚಾರ ನಡೆಸಿ ಹೋಗಿದ್ದಾರೆ. ಮಧುಗಿರಿ, ಪಾವಗಡಕ್ಕೆ ತೆಲಗು ನಟ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಬಂದು ಹೋಗಿದ್ದಾರೆ. ಉಳಿದಂತೆ ಕಾಂಗ್ರೆಸ್ ಪರ ಸಿನಿಮಾ ನಟ, ನಟಿಯರ ದಂಡು ಬಂದು ಹೋಗಿದೆ.
ಹೀಗಾಗಿ ಚುನಾವಣಾ ಕಣ ಮತ್ತಷ್ಟು ರಂಗೇರ ತೊಡಗಿದೆ. ಈಗಾಗಲೇ ಅಭ್ಯರ್ಥಿಗಳು ರೋಡ್ ಶೋ ಮುಂದುವರೆಸಿದ್ದಾರೆ. ತುಮಕೂರು ನಗರದ ಪ್ರಮುಖ ಬಡಾವಣೆಗಳಲ್ಲಿ ದೊಡ್ಡ ಮಟ್ಟದಲ್ಲಿ ರೋಡ್ ಶೋ ನಡೆಸುತ್ತಿದ್ದಾರೆ. ಇನ್ನೊಂದೆಡೆ ಆಯಾ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಯಾಚಿಸುತ್ತಿದ್ದಾರೆ.
ಬಸ್ ನಿಲ್ದಾಣದಲ್ಲೂ: ಈಗಾಗಲೇ ರೇಲ್ವೆ ನಿಲ್ದಾಣ, ಬಸ್ ನಿಲ್ದಾಣ ಮುಂತಾದ ಜನನಿಬಿಡ ಜಾಗಗಳಿಗೆ ಹೋಗಿ ಅಭ್ಯರ್ಥಿಗಳು ಪ್ರಚಾರ ನಡೆಸುತ್ತಿದ್ದಾರೆ. ಇನ್ನೊಂದೆಡೆ ಪಕ್ಷದಿಂದ ಪಕ್ಷಕ್ಕೆ ವಲಸೆ ಕೂಡ ಆರಂಭವಾಗಿದೆ. ಇನ್ನು ಚುನಾವಣೆಗೆ ಐದು ದಿವಸವಷ್ಟೆ ಬಾಕಿ ಇದ್ದು ದೊಡ್ಡ ಮಟ್ಟದಲ್ಲಿ ಚುನಾವಣಾ ಕಣ ರಂಗೇರುತ್ತಿದೆ.
ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ಕೂಡ ತಮ್ಮ ರೋಡ್ ಶೋ ಮುಂದುವರೆಸಿದ್ದಾರೆ. ಮಂಗಳವಾರ ಸಂಜೆ ಅವರು ಸೋಮೇಶ್ವರಪುರಂನಲ್ಲಿ ರೋಡ್ ಶೊ ನಡೆಸಿದರು. ಹಾಗೆಯೇ ಕೆಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಕೂಡ ರೋಡ್ ಶೋ ನಡೆಸಿದ್ದಾರೆ. ಬೇರೆ ಪಕ್ಷಗಳಿಂದ ಕೆಜೆಪಿಗೆ ಕರೆ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ರಫೀಕ್ ಅಹಮದ್ ಕೂಡ ದೊಡ್ಡ ಮಟ್ಟದಲ್ಲಿ ಪ್ರಚಾರವನ್ನು ನಡೆಸುತ್ತಿದ್ದಾರೆ.
ಇನ್ನು ಒಂದೆರೆಡು ದಿವಸದಲ್ಲಿ ಸ್ಟಾರ್ ಕ್ಯಾಂಪನೇರ್ಗಳ ನಿರೀಕ್ಷೆಯಲ್ಲಿ ಎಲ್ಲಾ ಪಕ್ಷಗಳು ಇವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

