ಪಾವಗಡಕ್ಕೆ ಇಂದು ಎಚ್.ಡಿ.ಕುಮಾರಸ್ವಾಮಿ
ಪಾವಗಡ: ವಿಧಾನ ಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಮೇ 1ರಂದು ಬೆಳಿಗ್ಗೆ 10 ಗಂಟೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪಟ್ಟಣದ ಮಾರಮ್ಮನಗುಡಿ ಮೈದಾನಕ್ಕೆ ಆಗಮಿಸಲಿದ್ದು ಅಭ್ಯರ್ಥಿ ಕೆ.ಎಂ. ತಿಮ್ಮರಾಯಪ್ಪ ಪರ ಪ್ರಚಾರ ಭಾಷಣ ಮಾಡಲಿದ್ದಾರೆ.
ಇವರ ಜೊತೆಯಲ್ಲಿ ಜಿಲ್ಲಾಧ್ಯಕ್ಷ ಹುಲಿನಾಯಕರ್, ಮುಖಂಡ ಚನ್ನಿಗಪ್ಪ ಸೇರಿದಂತೆ ಇತರರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸುವಂತೆ ಪಕ್ಷದ ಮುಖಂಡ ಹಾಗೂ ಪುರಸಭೆ ಸದಸ್ಯ ವಸಂತ್ಕುಮಾರ್ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ತೊರೆದು
ಜೆಡಿಎಸ್ಗೆ ಸೇರ್ಪಡೆ
ಪಾವಗಡ: ಮಂಗಳವಾರ ಜೆಡಿಎಸ್ ಹಿರಿಯ ಮುಖಂಡ ಎಚ್.ವಿ.ಕುಮಾರಸ್ವಾಮಿ, ಮುಖಂಡರಾದ ರಂಗಸಮುದ್ರ ಕೆ.ವಿ. ಗಿರಿರಾಜ್, ಮಾಜಿ ಸದಸ್ಯ ತಿಪ್ಪೇಸ್ವಾಮಿ ಸಮ್ಮುಖದಲ್ಲಿ ಮುಖಂಡರಾದ ಓಬಳಾಪುರ ಗ್ರಾಮದ ಬಸವರೆಡ್ಡಿ, ಚಿದಾನಂದ, ಟಿ.ಸತ್ಯನಾರಾಯಣ ಹಾಗೂ ಕೆ.ಎನ್. ಹಟ್ಟಿ ನಾಗರಾಜಪ್ಪ ಮುಂತಾದವರು ಬಿಎಸ್ಆರ್ ಹಾಗೂ ಕಾಂಗ್ರೆಸ್ ತೊರೆದು ಜೆಡಿಎಸ್ಗೆ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

