ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ
ತುಮಕೂರು: ತುಮಕೂರು ಜಿಲ್ಲೆಯಲ್ಲಿ ನೋಂದಾಯಿತ ಕಚೇರಿಗಳನ್ನುಳ್ಳ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಈ ಕೆಳಕಂಡಂತೆ ಚುನಾವಣೆ ನಡೆಯಲಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಆಗಸ್ಟ್ 25, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸೆ.1, ಇತರೆ ಸಹಕಾರ ಸಂಘಗಳು (ಕೃಷಿಯೇತರ ಪತ್ತಿನ ಸಹಕಾರ ಸಂಘಗಳು, ಅರ್ಬನ್ ಬ್ಯಾಂಕ್‌ಗಳು ಮತ್ತು ಇತರೆ ಪತ್ತಿನ ಸಹಕಾರ ಸಂಘಗಳಿಗೆ) ಸೆ.7 ಮತ್ತು 8, ಮತ್ತು ಇತರೆ ಪತ್ತಿನ ಸಹಕಾರ ಸಂಘಗಳಿಗೆ (ಗ್ರಾಹಕರ ಸಂಘಗಳು, ಇತರೆ ಎಲ್ಲಾ ಪತ್ತೇತರ ಸ.ಸಂಘಗಳು, ಇತರೆ) ಸೆ.15, ರಂದು ಚುನಾವಣೆ ನಡೆಯಲಿದೆ.
ರೋಜ್‌ಗಾರ್ ಯೋಜನೆ
ಪಾವಗಡ: ಪಾವಗಡ ಪುರಸಭಾ ಕಾರ್ಯಾಲಯದ ವತಿಯಿಂದ ಸ್ವರ್ಣಜಯಂತಿ ಶಹರಿ ರೋಜ್‌ಗಾರ್ ಯೋಜನೆಯಡಿ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ಅರ್ಜಿ, ದಾಖಲಾತಿ ಜತೆ 25ರೊಳಗಾಗಿ ಸಲ್ಲಿಸತಕ್ಕದ್ದು. ಮಾಹಿತಿಗಾಗಿ ಸಮುದಾಯ ವ್ಯವಹಾರ ಅಧಿಕಾರಿಗಳು, ಪುರಸಭೆ ಸಂಪರ್ಕಿಸಬಹುದು. ದೂ. 08136-244569
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

