ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಪ್ರಾಮಾಣಿಕತೆಯಿಂದ ಕೆಲಸ
ಕ.ಪ್ರ.ವಾರ್ತೆ ಮಧುಗಿರಿ ಆ. 1
ನಮ್ಮ ಅಧಿಕಾರ ಅವಧಿಯಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಪ್ರಮಾಣಿಕತೆಯಿಂದ ಕೆಲಸ ಮಾಡುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷ ಎನ್. ಮಹಾಲಿಂಗೇಶ್ ತಿಳಿಸಿದರು.
ಇಲ್ಲಿನ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಏರ್ಪಟಾಗಿದ್ದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿ, ಎಲ್ಲ ನೌಕರರ ಹಿತ ಕಾಪಾಡಲು ಕಟಿ ಬದ್ಧವಾಗಿದ್ದು ಅದೇ ರೀತಿ ಎಲ್ಲರ ಸಹಕಾರ ಅತಿ ಮುಖ್ಯ ಎಂದರು.
ರಾಜ್ಯ ಪರಿಷತ್ ಸದಸ್ಯ ಪ್ರಭಾಕರ ರೆಡ್ಡಿ ಸರ್ಕಾರಿ ನೌಕರರ ರಕ್ಷಣೆಗೆ ಬದ್ಧವಾಗಿದ್ದು ಯಾರೇ ಆಗಲಿ ನೌಕರರ ಮೇಲೆ ದಬ್ಬಾಳಿಕೆ ಮಾಡುವ ವಿಚಾರ ಸಂಘದ ಗಮನಕ್ಕೆ ತಂದರೆ ಅಂತವರ ಬೆಂಬಲಕ್ಕೆ ಸಂಘ ಸದಾ ಸಿದ್ಧವಿದೆ ಎಂದರು.
ತಾ.ಪಂ.ಇಓ ಎಚ್.ಡಿ. ಮಹಾಲಿಂಗಯ್ಯ ಸಂಘಟಿತ ಹೋರಾಟ ಮನೋಭಾವದಿಂದ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ. ಆ ನಿಟ್ಟಿನಲ್ಲಿ ಸರ್ಕಾರಿ ನೌಕರರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಮಾತ್ರ ಸೀಮಿತವಾಗದೇ ಸಾರ್ವಜನಿಕರ ಸಮಸ್ಯೆಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕು ಎಂದರು.
ಹಿರಿಯ ಸಾಹಿತಿ ಪ್ರೊ.ಮ.ಲ.ನ.ಮೂರ್ತಿ ಮಾತನಾಡಿ, ಅಧಿಕಾರ ಸೇವೆಗೆ ಮೀಸಲಾದುದು. ಆಯ್ಕೆಯಾಗಿರುವ ಹೊಸ ಪದಾಧಿಕಾರಿಗಳು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬದ್ಧತೆ, ಶುದ್ಧತೆಯಿಂದ ಕೆಲಸ ಮಾಡುವಂತೆ ಸಲಹೆ ನೀಡಿದರು.
ತಹಸೀಲ್ದಾರ್ ಕೆ. ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಎಸ್.ಎನ್. ಹನುಮಂತರಾಯಪ್ಪ, ಪ್ರೊ.ಮುನೀಂದ್ರ ಕುಮಾರ್, ಉಪನ್ಯಾಸಕ ರಂಗಪ್ಪ, ಪಿಎಸ್ಐ ನಿರ್ಮಲಾ, ಪ್ರಾಂಶುಪಾಲ ಕೆ. ಕೃಷ್ಣಸ್ವಾಮಿ, ರಂಗಧಾಮಯ್ಯ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

