ಒಕ್ಕಲಿಗರ ಸಂಘ ನೂತನ ಸದಸ್ಯರಿಗೆ ಐಡಿ ವಿತರಣೆ
ಕುಣಿಗಲ್: ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೂತನ ಸದಸ್ಯತ್ವ ಪಡೆದಿರುವ ಸದಸ್ಯರಿಗೆ ಗುರುತಿನ ಕಾರ್ಡ್ನ್ನು ಇದೇ 2ರಿಂದ 12ರವರೆಗೂ ಜ್ಞಾನಭಾರತಿ ಶಾಲಾವರಣದಲ್ಲಿ ವಿತರಿಸಲಾಗುವುದೆಂದು ರಾಜ್ಯ ಒಕ್ಕಲಿಗ ಸಂಘದ ಜಂಟಿ ಕಾರ್ಯದರ್ಶಿ ಆಡಿಟರ್ ನಾಗರಾಜ್ ತಿಳಿಸಿದರು.
ಶುಕ್ರವಾರ, ಪಟ್ಟಣದಲ್ಲಿ ತಾಲೂಕು ಒಕ್ಕಲಿಗರ ಸಂಘದಾಶ್ರಯದಲ್ಲಿ ಜ್ಞಾನಭಾರತಿ ಶಾಲಾವರಣದಲ್ಲಿ ಒಕ್ಕಲಿಗರ ಸಂಘದ ನೂತನ ಸದಸ್ಯರಿಗೆ ಗುರುತಿನ ಕಾರ್ಡ್ ವಿತರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಸಂಘದಲ್ಲಿ ಒಟ್ಟಾರೆ 6100 ಸದಸ್ಯರಿದ್ದು, ಹೊಸದಾಗಿ ಸೇರ್ಪಡೆಗೊಂಡಿರುವ 600 ಸದಸ್ಯರಿಗೆ ಗುರುತಿನ ಚೀಟಿಯನ್ನು ವಿತರಿಸಲಾಗುತ್ತಿದ್ದು, ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರಲ್ಲದೆ, ತಾಲೂಕಿನಲ್ಲಿ ಜಿಲ್ಲಾ ಒಕ್ಕಲಿಗರ ಸಂಘದಾಶ್ರಯದಲ್ಲಿ ಡಿಪ್ಲೊಮಾ ಕಾಲೇಜು ಪ್ರಾರಂಭಕ್ಕೆ ನಿವೇಶನ ಖರೀದಿಸಲಾಗಿದ್ದು, ಕಾಲೇಜು ಪ್ರಾರಂಭಕ್ಕೆ ರಾಜ್ಯ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದೆ. ಅರ್ಜಿ ಅನುಮೋದನೆಗೊಂಡ ಕೂಡಲೆ ಕಾಲೇಜು ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದೆಂದರು.
ತುಮಕೂರು ನಗರದಲ್ಲಿ 200 ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕೆ ನೀಲನಕ್ಷೆ ಸಿದ್ಧಪಡಿಸಿ ನಗರಾಭಿವೃದ್ಧಿ ಪ್ರಾಧಿಕಾರದ ಅನುಮೋದನೆಗೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೆ ಶಂಕುಸ್ಥಾಪನೆ ನೆರವೇರಿಸಲಾಗುವುದೆಂದರು. ಈಗಾಗಲೆ 200 ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಹಾಸ್ಟೆಲ್ ಪ್ರಾರಂಭಿಸಲಾಗಿದೆ. ಅಲ್ಲದೆ ಕೆಂಪೇಗೌಡ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಪ್ರಾರಂಭಕ್ಕೆ ನಿವೇಶನ ಖರೀದಿಸಲಾಗಿದೆ ಎಂದ ಅವರು ಜಿಲ್ಲಾ ಸಂಘದ ವತಿಯಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ರಾಜ್ಯ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲೂ ಹಮ್ಮಿಕೊಳ್ಳಲಾಗುವುದೆಂದರು.
ತಾಲೂಕು ಸಂಘದ ಕಾರ್ಯದರ್ಶಿ ಅನಂತಯ್ಯ, ಪ್ರಮುಖರಾದ ಶಿವಣ್ಣ, ಗೋವಿಂದೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

