ಎದೆಹಾಲು ಉಣಿಸುವುದರಿಂದ ತಾಯಿ-ಮಗು ಬಾಂಧವ್ಯ ವೃದ್ಧಿ
ತಿಪಟೂರು: ಗರ್ಭಿಣಿ ಮಹಿಳೆ ತಾನು ಗರ್ಭಿಣಿಯಿರುವಾಗ ಪೌಷ್ಟಿಕ ಆಹಾರ ಹಾಗೂ ಆರೋಗ್ಯದ ಕಡೆ ಗಮನ ಹರಿಸಿದರೆ ಮುಂದೆ ಆರೋಗ್ಯವಂತ ಮಗು ಪಡೆಯಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಸಿ.ರಂಗನಾಥ್ ತಿಳಿಸಿದರು.
ತಾಲೂಕಿನ ಮಲ್ಲಿಪಟ್ಟಣ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಸ್ತ್ರೀಶಕ್ತಿ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಾಯಿ ತನ್ನ ಮಗುವಿಗೆ ಹೆಚ್ಚಿನ ಅವಧಿಯವರೆಗೆ ಹಾಲುಣಿಸುವುದರಿಂದ ಸೌಂದರ್ಯ ಹಾಳಾಗದು. ತಾಯಿ ಮತ್ತು ಮಗುವಿನ ಬಾಂಧವ್ಯ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಜಾಗೃತಿ ಶಿಬಿರ ಅಗತ್ಯತೆ ಇದೆ ಎಂದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಪಿನಾಥ್ ಕಾರ್ಯಕ್ರಮ ಉದ್ಘಾಟಿಸಿ ಎದೆ ಹಾಲಿನಿಂದ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಇಲಾಖೆಯ ಸರೋಜಮ್ಮ ಎದೆ ಹಾಲಿನ ಮಹತ್ವ ಮತ್ತು ಆರೋಗ್ಯ ಇಲಾಖೆಯಿಂದ ಸಿಗುವಂತೆ ಸೌಲಭ್ಯಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಇಲಾಖಾ ಮೇಲ್ವಿಚಾರಕರು, ಗ್ರಾ.ಪಂ ಸದಸ್ಯರು, ವೃತ್ತ ಕಾರ್ಯಕರ್ತೆಯರು ಸೇರಿದಂತೆ ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು. ಶಿವಕುಮಾರ್ ಪ್ರಾರ್ಥಿಸಿ, ಮೇಲ್ವಿಚಾರಕಿ ಲೀಲಾಬಾಯಿ ನಿರೂಪಿಸಿ, ರವಿಕುಮಾರ್ ಸ್ವಾಗತಿಸಿ, ಪಂಕಜ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

