ತುಮಕೂರು

ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ: ಲಕ್ಷ್ಮೀಕಾಂತ್

Published On :

ತುರುವೇಕೆರೆ: ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕಲಾಕೀರ್ತಿ ವಿದ್ಯಾ ಸಂಸ್ಥೆ ವತಿಯಿಂದ ತಾಲೂಕಿನ ಬಿಗನೇನಹಳ್ಳಿಯಲ್ಲಿ ನಡೆದ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡ ಕೂಟದಲ್ಲಿ ಕಬಡ್ಡಿ ಪ್ರಮುಖ ಆಕರ್ಷಣೀಯವಾಗಿತ್ತು.
 ಕ್ರೀಡಾಕೂಟವನ್ನು ವಾಲಿಬಾಲ್ ಅನ್ನ್ನು ಚಿಮ್ಮುವ ಮೂಲಕ ಉದ್ಘಾಟಿಸಿದ ತಾಲೂಕು ಪಂಚಾಯ್ತಿ ನೂತನ ಅಧ್ಯಕ್ಷ ಲಕ್ಷ್ಮೀಕಾಂತ್ ಗ್ರಾಮಾಂತರ ಪ್ರದೇಶದಲ್ಲೂ ಉತ್ತಮ ಕ್ರೀಡಾಪಟುಗಳು ಇದ್ದಾರೆ. ಅವರಲ್ಲಿ ಹುದುಗಿರುವ ಕ್ರೀಡಾ ಆಸಕ್ತಿಯನ್ನು ಹೊರತಂದು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದಲ್ಲಿ ಅತ್ಯುತ್ತುಮ ಕ್ರೀಡಾಪಟುವಾಗಿ ಮಾರ್ಪಡಲಿದ್ದಾರೆ ಎಂದು ಹೇಳಿದರು.        
ಜಿ.ಪಂ.ನ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಬಿ.ಜಗದೀಶ್ ಕ್ರೀಡಾ ಜ್ಯೋತಿ ಸ್ವೀಕಾರ ಮಾಡಿ ಕೇವಲ ಓದು ಮಾತ್ರವೇ ಜೀವನವಲ್ಲ. ಕ್ರೀಡೆಯೂ ಮುಖ್ಯ. ಹಲವಾರು ಮಂದಿ ಕ್ರೀಡಾಪಟುಗಳು ಇಂದು ದೇಶದಾದ್ಯಂತ ಇದ್ದಾರೆ. ದೇಶದ ಕೀರ್ತಿ ಪತಾಕೆಯನ್ನು ದೇಶ ವಿದೇಶಗಳಲ್ಲೂ ಹಾರಿಸಿದ್ದಾರೆ. ಇದು ಕ್ರೀಡೆಯಿಂದ ಸಾಧ್ಯವಾಗಿದೆ ಎಂಬುದನ್ನು ಕ್ರೀಡಾಪಟುಗಳು ಮನಗಾಣಬೇಕು ಎಂದರು. ಗ್ರಾಮೀಣ ಸೊಗಡಿನ ಕಬಡ್ಡಿ ಪಂದ್ಯಾವಳಿಗೆ ಮುನ್ನ ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಬಿ.ಜಗದೀಶ್ ಹಾಗೂ ತಾ.ಪಂ.ಅಧ್ಯಕ್ಷ ಲಕ್ಷ್ಮೀಕಾಂತ್ ಕ್ರೀಡಾಪಟುಗಳಿಗೆ ಹಸ್ತಲಾಘವ ನೀಡುವ ಮೂಲಕ ಪ್ರೋತ್ಸಾಹಿಸಿದರು. ಹೋಬಳಿ ಮಟ್ಟದ ಕ್ರೀಡಾ ಪಂದ್ಯಾವಳಿಯಲ್ಲಿ ಸುಮಾರು 10 ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಕಬಡ್ಡಿ, ಖೋಖೋ, ವಾಲಿಬಾಲ್, ಷಟಲ್ ಬಾಲ್ ಬ್ಯಾಂಡ್ಮಿಟನ್, ಗುಂಪು ಆಟಗಳು, 100 ಮೀಟರ್‌ನಿಂದ 1500 ಮೀಟರ್ ವರೆಗಿನ ಓಟದ ಸ್ಪರ್ಧೆ ಏರ್ಪಡಿಸಲಾಗಿತ್ತು. ರಿಲೇ, ಲಾಂಗ್ ಜಂಪ್, ಹೈಜಂಪ್, ಶಾಟ್ ಪುಟ್, ಡಿಸ್ಕಸ್, ಥ್ರೋ ಬಾಲ್, ಜಾವ್ಲಿನ್ ಹಾಗೂ ಹ್ಯಾಮರ್ ಥ್ರೋ ಆಟಗಳನ್ನು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿತ್ತು. ಸುಮಾರು 700 ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಮಾರಂಭದಲ್ಲಿ ಕಲಾಕೀರ್ತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಬಿ.ಮಹಲಿಂಗಯ್ಯ, ಇ ಸಿ ಓ ಕಮಲಾಕ್ಷಿ, ಮುಖ್ಯ ಶಿಕ್ಷಕ ತಾತಯ್ಯ,  ಎಸ್‌ಡಿಎಂಸಿ ಉಪಾಧ್ಯಕ್ಷ ನಾಗರಾಜು, ಮಾಜಿ ಎಸ್‌ಡಿಎಂಸಿ ಅಧ್ಯಕ್ಷ ಎ.ಎಂ.ರಾಮಕೃಷ್ಣ, ಗ್ರಾಮ ಪಂಚಾಯ್ತಿ ಸದಸ್ಯೆ ಮಮತಾ ಚಂದ್ರೇಗೌಡ, ಮುಖ್ಯ ಶಿಕ್ಷಕಿ ಶಿವಗಂಗಮ್ಮ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.