ರೋಟರಾಕ್ಟ್‌ನಿಂದ ಲೀಡರ್‌ಷಿಪ್ ಕ್ಯಾಂಪೇನ್
ಚಿಕ್ಕನಾಯಕನಹಳ್ಳಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಯಾವುದೇ ಪದವಿ ಪಡೆದ ನಂತರ ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಆತಂಕಕ್ಕೊಳಗಾಗುವ ಬದಲು, ಕಾಲೇಜಿನ ದಿನಗಳಲ್ಲೇ ಯಾವ ರೀತಿ ಬದುಕಬೇಕೆಂಬುದನ್ನು ತೀರ್ಮಾನಿಸಿರಬೇಕು ಎಂದು ಬೆಂಗಳೂರಿನ ರೋಟರಾಕ್ಟ್ ಪ್ರತಿನಿಧಿ ಹರಿಹಂತ್ ಕುಮಾರ್ ನುಡಿದರು.
ಅವರು ಇತ್ತೀಚೆಗೆ ಇಲ್ಲಿನ ಸರ್ಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿ ಬೆಂಗಳೂರಿನ ರೋಟರಾಕ್ಟ್ ಸಂಸ್ಥೆಯ ಸಹಯೋಗದೊಂದಿಗೆ ಚಿ.ನಾ.ಹಳ್ಳಿ ತಾಲೂಕಿನಲ್ಲಿ ಹೊಸದಾಗಿ ರೋಟರಾಕ್ಟ್ ಸಂಸ್ಥೆಯನ್ನು ಪ್ರಾರಂಭಿಸಿ 19 ರಿಂದ 29 ವರ್ಷ ವಯೋವಾನದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುವುದು ಎಂದರು.
ನೇಪಾಳದ ಮೂಲದ ಪ್ರತಿನಿಧಿಯಾದ ಕೃಪಾಜೋಷಿಯವರು ಮಾತನಾಡಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬೇಕಾಗುವ ಸಲಹೆ ಮತ್ತು ಸಹಕಾರ ನೀಡಲಾಗುವುದು. ರಾಷ್ಟ್ರದ ಬೇರೆ ಬೇರೆ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳು ಪದವಿಯ ನಂತರ ಹೇಗೆ ತಮ್ಮ ಜೀವನವನ್ನು ರೂಪಿಸಿಕೊಳ್ಳುತ್ತಾರೆಂಬುದನ್ನು ನೀವು ತಿಳಿಯಬೇಕು. ಈ ನಿಟ್ಟಿನಲ್ಲಿ ರೋಟರಿ ನಿಮಗೆ ನೆರವು ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದರು.
ರೋಟರಿ ಅಧ್ಯಕ್ಷರಾದ ಸಿ.ಎಸ್. ಪ್ರದೀಪ್ ಮಾತನಾಡುತ್ತಾ ಸ್ವಾರ್ಥರಹಿತ ಸೇವೆಗೆ ರೋಟರಿ ಸದಾ ಸಿದ್ಧವಾಗಿದೆ. ರೋಟರಾಕ್ಟ್ ಸಂಸ್ಥೆಯ ಪ್ರತಿನಿಧಿಗಳು ನಮ್ಮ ತಾಲೂಕಿನ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳುವ ಬಗ್ಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ನಮ್ಮ ಸಹಕಾರ ಸದಾ ಇರುತ್ತದೆ. ಇದರಿಂದ ಪದವಿನಂತರ ಮುಂದೇನು ಮಾಡಬೇಕೆಂಬ ಗೊಂದಲದಿಂದ ಪಾರುಮಾಡಲು ಇದು ಸಹಕಾರಿಯಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ವರದರಾಜು ಮತ್ತು ಸಿಬ್ಬಂದಿ ವರ್ಗ, ರೋಟರಿ ಕಾರ್ಯದರ್ಶಿ ಡಾ. ಪ್ರಶಾಂತ ಕುಮಾರಶೆಟ್ಟಿ, ರೋಟರಿ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

