ತುಮಕೂರು

'ವಿದ್ಯಾರ್ಥಿಗಳಿಗೆ ಸಂಶೋಧನಾ ಮನೋಭಾವ ಅವಶ್ಯ'

Published On :

ನಾಗಮಂಗಲ: ಚಿಕ್ಕ ವಯಸ್ಸಿನಲ್ಲೇ ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶಗಳ ಮಾದರಿಗಳನ್ನು ಸ್ವತಃ ತಯಾರಿಸಿ ಹೊಸ ಹೊಸ ಆವಿಷ್ಕಾರಗಳನ್ನು ಕಂಡುಹಿಡಿಯಬೇಕು ಎಂದು ಆದಿಚುಂಚನಗಿರಿ ಕ್ಷೇತ್ರದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು. ಆದಿಚುಂಚನಗಿರಿಯಲ್ಲಿ ಆಯೋಜಿಸಿದ್ದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಮಂಡ್ಯ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶ್ರೀಗಳು ಭಾಗವಹಿಸಿ ಮಾತನಾಡಿ, ಎಳೆ ವಯಸ್ಸಿನಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ದೇಶಕ್ಕೆ ಪರಿಚಯಿಸಬೇಕು ಎಂದರು. ಪ್ರಸ್ತುತ ಸಂದರ್ಭ ಎಲ್ಲವನ್ನೂ ಶಿಕ್ಷಕರೇ ಹೇಳುತ್ತಾರೆಂದು ಎಂದು ಅವರನ್ನು ಪೂರ್ಣವಾಗಿ ಅವಲಂಬಿಸದೇ ಸ್ವಪರಿಶ್ರಮದಿಂದ ಜ್ಞಾನಾರ್ಜನೆಗೆ ವಿದ್ಯಾರ್ಥಿಗಳು ತೊಡಗಬೇಕು. ಶಿಕ್ಷಕರು ಹೇಳಿಕೊಟ್ಟದ್ದನ್ನು ಮಾತ್ರ ಬಾಯಿ ಪಾಠದಂತೆ ಒಪ್ಪಿಸುವ ಬದಲು ಸ್ವಅನುಭವದಿಂದ ಮಾದರಿಗಳ ಹಿಂದಿನ ವೈಜ್ಞಾನಿಕ ತತ್ವವನ್ನು ಹೇಳುವಂತೆ ವಿದ್ಯಾರ್ಥಿಗಳನ್ನು ಶಿಕ್ಷಕರು ತಯಾರು ಮಾಡಬೇಕು ಎಂದು ಸಲಹೆ ನೀಡಿದರು.

ಕಾರ್ಯದರ್ಶಿಯಾಗಿ ಮಾಲೂರಪ್ಪ
ತುಮಕೂರು: ಇಲ್ಲಿನ ಬಟವಾಡಿಯಲ್ಲಿರುವ ಶ್ರೀ ಸಿದ್ದರಾಮೇಶ್ವರ ಬಡಾವಣೆಯ ಬಸವ ಭವನದಲ್ಲಿ ಸಿದ್ದರಾಮೇಶ್ವರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಭೆಯನ್ನು ಸಂಪತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪರಮೇಶ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಲೂರಪ್ಪ ಅವರನ್ನು ಸಂಘದ ಕಾರ್ಯದರ್ಶಿಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅದೇ ರೀತಿ ಮಾಲೂರಪ್ಪನವರಿಂದ ತೆರವಾದ ಸ್ಥಾನಕ್ಕೆ ಪಂಚಾಕ್ಷರಪ್ಪ ಅವರನ್ನು ಸಂಚಾಲಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಮುಂದೆ  ನಡೆಯಲಿರುವ ಗೌರಿ-ಗಣೇಶ ಹಬ್ಬದ ಆಚರಣೆಯ ಸಲುವಾಗಿ ಚರ್ಚಿಸಲು ಆ. 25 ರಂದು ಬೆಳಗ್ಗೆ 11 ಗಂಟೆಗೆ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಸಂಪತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಂಘದ ಕಾರ್ಯಕಾರಿ ಮಂಡಲಿಯವರು ತಪ್ಪದೇ ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಲು ಕೋರಲಾಗಿದೆ.

ರೇಲ್ವೆ ಸಚಿವರಿಗೆ ಅಭಿನಂದನೆ
ತುಮಕೂರು: ತುಮಕೂರು ಬೆಂಗಳೂರು ನಡುವೆ ನೂತನ ರೈಲು ಸಂಚರಿಸಲು ಅನುವು ಮಾಡಿಕೊಟ್ಟ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಿಲ್ಲಾ ಛಲವಾದಿ ಮಹಾಸಭಾ ಅಭಿನಂದನೆ ಸಲ್ಲಿಸಿದೆ. ಅದೇ ರೀತಿ ಕರ್ನಾಟಕ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಕೇಂದ್ರ ರೇಲ್ವೆ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿರುವುದಕ್ಕೂ ಜಿಲ್ಲಾ ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಬಿ. ಶಾಂತರಾಜು, ಭಾನುಪ್ರಕಾಶ್, ಕೃಷ್ಣಪ್ಪ ಹೆಗ್ಗೆರೆ ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.