ತುಮಕೂರು

10 ರಂದು ಒಕ್ಕಲಿಗ ಪ್ರತಿಭಾ ಪುರಸ್ಕಾರ

Published On :

ತುಮಕೂರು: ಆ.10 ರಂದು ತುಮಕೂರು ಜಿಲ್ಲಾ ಒಕ್ಕಲಿಗ ನೌಕರರ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಅಭಿನಂದನೆ ಹಾಗೂ ನಿವೃತ್ತ ಸದಸ್ಯರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಮಾರಂಭ ತುಮಕೂರಿನ ಕೆ.ಆರ್. ಬಡಾವಣೆಯಲ್ಲಿರುವ ಪೊಲೀಸ್ ಚಿಲುಮೆ ಸಮುದಾಯ ಭವನದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಏರ್ಪಾಟಾಗಿದೆ. ಸಮಾರಂಭವನ್ನು ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಮಾಯಸಂದ್ರದ ಕಲ್ಪತರು ಆಶ್ರಮದ ಶಿವಕುಮಾರನಾಥ ಸ್ವಾಮಿಗಳು ಸಾಧಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು  ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೆರವೇರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಬೆಂಗಳೂರು ವಿಜಯನಗರ ಕ್ಷೇತ್ರದ ಎಂ. ಕೃಷ್ಣಪ್ಪ ಪಾಲ್ಗೊಳ್ಳಲ್ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಣಿಗಲ್ ಶಾಸಕ ಡಿ. ನಾಗರಾಜಯ್ಯ, ತುರುವೇಕೆರೆ ಶಾಸಕರಾದ ಎಂ.ಟಿ. ಕೃಷ್ಣಪ್ಪ, ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್, ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶ್ಗೌಡ, ವಿಧಾನಪರಿಷತ್ ಸದಸ್ಯರಾದ ವೈ.ಎ. ನಾರಾಯಣಸ್ವಾಮಿ, ಮಾಜಿ ಶಾಸಕ ಗೌರಿಶಂಕರ್ ಪಾಲ್ಗೊಳ್ಳಲ್ಲಿದ್ದಾರೆ. ಅತಿಥಿಗಳಾಗಿ ಜಿಪಂ ಸಿಇಓ ಗೋವಿಂದರಾಜು, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಚೌದ್ರಿ ಶಂಕರ್, ಗುತ್ತಿಗೆದಾರ ನರಸೇಗೌಡ, ಬಿ.ಎಚ್. ಜಗದೀಶ್, ಶಶಿಕಿರಣ್, ಚಿದಾನಂದ ಇತರರು ಪಾಲ್ಗೊಳ್ಳಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.