ಸ್ವಪರಿವರ್ತನೆಯಿಂದ ವಿಶ್ವಪರಿವರ್ತನೆ
ಕ.ಪ್ರ.ವಾರ್ತೆ ತುಮಕೂರು ಆ.5
ನಮ್ಮ ವ್ಯಕ್ತಿತ್ವ ಪರಿಪಕ್ವವಾದಾಗಲೇ ನಾವು ಸಮಾಜವನ್ನು ಪರಿವರ್ತಿಸಲು ಸಾಧ್ಯ. ಸ್ವಪರಿವರ್ತನೆಯಿಂದಲೇ ವಿಶ್ವಪರಿವರ್ತನೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯದ ರಾಜಯೋಗಿನಿ ಬಿ.ಕೆ ಜಯಂತಿ ಅಕ್ಕ ಅಭಿಪ್ರಾಯಪಟ್ಟರು.
ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ.,ಬಿ.ಬಿ.ಎಂ., ಬಿ.ಎ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ಯಶಸ್ಸಿನ ಮೆಟ್ಟಿಲುಗಳು ವಿಷಯ ಕುರಿತು ಉಪನ್ಯಾಸ ನೀಡಿದರು.
ಇಂದಿನ ಕುಲುಷಿತ ವಾತಾವರಣದಲ್ಲಿ ವಿದ್ಯಾರ್ಥಿಗಳು ಹಿಂದೆಂದಿಗಿತಂತಲೂ ಗೊಂದಲದಲ್ಲಿದ್ದಾರೆ. ಅವರಿಗೆ ಮಾದರಿಗಳು ಇಲ್ಲವಾಗಿವೆ. ಎಲ್ಲೆಡೆ ಕೈಬೀಸಿ ಕರೆಯುವ ಭೌತಿಕ ಆಕರ್ಷಣೆಗಳ ಕಾರಣದಿಂದ ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ತಾದ್ಯಾತ್ಮ್ಯ ಹೊಂದಲು ಸಾಧ್ಯವಾಗುತ್ತಿಲ್ಲ. ಮನಸ್ಸನ್ನು ತಾದ್ಯಾತ್ಮಗೊಳಿಸಿ, ವಿದ್ಯಾರ್ಥಿಗಳ ಸತ್ಚಾರಿತ್ರ್ಯದ ನಿರ್ಮಾಣಕ್ಕೆ ಆಧ್ಯಾತ್ಮ ಅಗತ್ಯವಾಗಿದೆ. ಆಧ್ಯಾತ್ಮದಿಂದ ನಮಗೆ ಆತ್ಮತೃಪ್ತಿ ಸಿಗುತ್ತದೆ.
ಆತ್ಮತೃಪ್ತಿಯಿಂದ ಆತ್ಮ ವಿಶ್ವಾಸ ಹೆಚ್ಚುತ್ತದೆ. ಈ ಆತ್ಮ ವಿಶ್ವಾಸವೇ ನಮ್ಮ ಯಶಸ್ಸಿನ ಕೀಲಿ ಕೈ ಎಂದು ಅಭಿಪ್ರಾಯಪಟ್ಟರು.
ಅಧ್ಯಯನಶೀಲರಾಗಿ: ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಮಕೂರು ವಿ.ವಿ. ಪರೀಕ್ಷಾಂಗ ಕುಲಸಚಿವ ಡಾ. ಎಂ. ಜಯರಾಮು ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನಶೀಲರಾಗಿ ಸಚ್ಚಾರಿತ್ರ್ಯವಂತರಾಗಬೇಕು. ವಿದ್ಯಾರ್ಥಿ ಜೀವನ ಸುಂದರವಾದುದು. ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಧ್ಯಯನಶೀಲತೆಗೆ ಆಧ್ಯಾತ್ಮಿಕತೆಯ ಸಂಘರ್ಷ ಸಿಕ್ಕರೆ ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸುತ್ತಾರೆ ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ವಿ.ವಿ. ಕಲಾ ಕಾಲೇಜಿನ ಪ್ರಾಂಶುಪಾಲ ಟಿ.ಎನ್. ಹರಿಪ್ರಸಾದ್ ಅವರು ಮಾತನಾಡಿ ಇಂದಿನ ಪ್ರಕ್ಷುಬ್ಧ ಸಾಂಸ್ಕೃತಿಕ ವಾತಾವರಣದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಿದೆ. ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಪಡೆದರಷ್ಟೇ ಸಾಲದು, ಒಳ್ಳೆಯ ಗುಣಗಳನ್ನು ಪಡೆಯಬೇಕು. ಸದ್ಗುಣಗಳಿಂದ ಕೂಡಿದ ಸದೃಢ ಸಮಾಜದ ನಿರ್ಮಾಣ ನಮ್ಮೆಲ್ಲರ ಆಧ್ಯತೆ ಆಗಬೇಕೆಂದು ಅಭಿಪ್ರಾಯ ಪಟ್ಟರು.
ಅಧ್ಯಾಪಕಿ ರೇಣುಕಾ ಎಚ್.ಆರ್. ನಿರೂಪಿಸಿ, ವಂದಿಸಿದರು. ಅಧ್ಯಾಪಕ ವೆಂಕಟರೆಡ್ಡಿ ರಾಮರೆಡ್ಡಿ, ಸುಬ್ರಹ್ಮಣ್ಯ ಶರ್ಮ, ಡಾ. ಎಸ್. ಶಿವಣ್ಣ, ಶ್ರೀಪಾದ ಕುಲಕರ್ಣಿ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

