ಯುವಕರ ಚಿತ್ತ ಕೈ ನತ್ತ: ರಾಜೇಂದ್ರ
ತುರುವೇಕೆರೆ: ರಾಜ್ಯದ ಯುವಕರ ಚಿತ್ತ ಕಾಂಗ್ರೆಸ್ನತ್ತ ನೆಟ್ಟಿದೆ. ಯುವಕರೆಲ್ಲರೂ ಕಾಂಗ್ರೆಸ್ ನಿಂದಲೇ ದೇಶದ ಅಭಿವೃಧ್ಧಿ ಸಾಧ್ಯ ಎಂದು ನಂಬಿದ್ದಾರೆ. ಕಾಂಗ್ರೆಸ್ ಸೇರಲು ಯುವಕರು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ಹೇಳಿದರು.
ತಾಲೂಕಿನಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವ ಆಂದೋಲನಕ್ಕೆ ಚಾಲನೆ ನೀಡಿದ ಅವರು ತಾಲೂಕಿನಲ್ಲಿ ಕನಿಷ್ಠ 10 ಸಾವಿರ ಯುವಕರನ್ನು ಸದಸ್ಯತ್ವ ಆಂದೋಲನದಲ್ಲಿ ಸದಸ್ಯರನ್ನಾಗಿ ಮಾಡಲಾಗುವುದು ಎಂದರು.
ರಾಹುಲ್ ಗಾಂಧಿಯವರ ಕನಸನ್ನು ನನಸು ಮಾಡಲು ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟನೆ ಮಾಡಲು ಯುವ ಕಾಂಗ್ರೆಸ್ನ ಪದಾಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದರು.
18 ರಿಂದ 35 ರ ವರೆಗಿನ ವಯೋವುತಿ ಇರುವವರನ್ನು ಸದಸ್ಯರನ್ನಾಗಿ ಮಾಡಲಾಗುವುದು. ಪ್ರತಿ ಬೂತ್ ನಲ್ಲಿ ಕನಿಷ್ಠ 15 ಮಂದಿ ಸದಸ್ಯರು ಇರುತ್ತಾರೆ. ಹಿಂದುಳಿದ ವರ್ಗ, ಎಸ್ಸಿ ಎಸ್ಟಿ, ಮಹಿಳೆಯರು ಹಾಗೂ ಸಾಮಾನ್ಯ ವರ್ಗದವರಿಗೆ ಬೂತ್ ಮಟ್ಟದಲ್ಲಿ ಮೀಸಲಾತಿ ನೀಡಲಾಗುವುದು ಎಂದು ರಾಜೇಂದ್ರ ಹೇಳಿದರು. ತಾಲೂಕಿನಲ್ಲಿ ಕಳೆದ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆಗೆ ಇಳಿದಿದ್ದ ಅಭ್ಯರ್ಥಿಯ ಪರಿಚಯ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಅಥವಾ ತಾಲೂಕಿನ ಮತದಾರರಿಗಾಗಲೀ ಮಾಹಿತಿ ಸಾಕಷ್ಟು ಇಲ್ಲದಿದ್ದುದರಿಂದ ಕಾಂಗ್ರೆಸ್ಗೆ ಹಿನ್ನೆಡೆಯಾಗಿತ್ತು. ಆದರೆ ಮುಂಬರುವ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಲು ಮುಂದಾಗಿದ್ದು ಎಲ್ಲ ಗೊಂದಲಗಳೂ ನಿವಾರಣೆಯಾಗಲಿದ್ದು ಪಕ್ಷ ಉತ್ತಮ ಬೆಳೆವಣಿಗೆ ಪಡೆಯಲಿದೆ ಎಂಬ ಆಶಾಭಾವನೆಯನ್ನು ರಾಜೇಂದ್ರ ವ್ಯಕ್ತಪಡಿಸಿದರು.
ತುರುವೇಕೆರೆ ವಿಧಾನಸಭಾ ಕ್ಷೇತ್ರದ 226 ಬೂತ್ ಗಳಲ್ಲಿ ಪಕ್ಷ ಸಂಘಟನೆ ಮಾಡಲು ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಕಾರ್ಯೋನ್ಮುಖರಾಗಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚೌದ್ರಿ ಟಿ ರಂಗಪ್ಪ, ಪಿಎಲ್ಡಿ ಬ್ಯಾಕ್ನ ಮಾಜಿ ಅಧ್ಯಕ್ಷ ಟಿ.ಎಸ್.ದಾನಿಗೌಡ, ಉಗ್ರೇಗೌಡ, ಪ್ರಧಾನ ಕಾರ್ಯದರ್ಶಿ ದಂಡಿನಶಿವರ ವಿಶ್ವನಾಥ್, ಕಾರ್ಯದರ್ಶಿ ನಂಜುಂಡಪ್ಪ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಬಿ.ಹನುಮಂತಯ್ಯ, ಮಾಜಿ ಜಿ.ಪಂ.ಸದಸ್ಯ ಎನ್.ಆರ್.ಜಯರಾಂ, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪುಟ್ಟಣ್ಣ, ಮಾಜಿ ತಾ.ಪಂ. ಉಪಾಧ್ಯಕ್ಷ ಸಿ.ಜೆ.ಆನಂದ್ ಕುಮಾರ್, ಎಸ್ಸಿ ಎಸ್ಟಿ ಅಧ್ಯಕ್ಷ ಮಾಯಸಂದ್ರ ಸುಬ್ರಹ್ಮಣ್ಯ ಮೊದಲಾದವರು ಉಪಸ್ಥಿತರಿದ್ದರು.
ಪಕ್ಷಕ್ಕೆ ಸೇರ್ಪಡೆ : ಕಾಂಗ್ರೆಸ್ ಪಕ್ಷಕ್ಕೆ ತಾಲೂಕು ಬಿಎಸ್ಪಿ ಅಧ್ಯಕ್ಷ ಉಮೇಶ್ ಹಾಗೂ ದುಂಡದ ತೇಜಸ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೇದ್ರ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ಎನ್.ಶಿವರಾಜ್ ಸಮ್ಮುಖ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

