ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶಂಕುಸ್ಥಾಪನೆ
ತುರುವೇಕೆರೆ: ತಾಲೂಕಿನ ಅರೇಮಲ್ಲೇನಹಳ್ಳಿಯಲ್ಲಿ ಸುಮಾರು 723.26 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶಾಸಕ ಎಂ.ಟಿ.ಕೃಷ್ಣಪ್ಪ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.
ಸುಮಾರು 10 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ವಸತಿ ಶಾಲೆಯಲ್ಲಿ 6 ನೇ ತರಗತಿಯಿಂದ 10 ನೇ ತರಗತಿಯ ಸುಮಾರು 250 ಮಕ್ಕಳಿಗೆ ಸ್ಥಳಾವಕಾಶ ನೀಡಲಾಗುವುದು. ಶೈಕ್ಷಣಿಕ ಕಟ್ಟಡಗಳ ಪೈಕಿ 5 ತರಗತಿ ಕೊಠಡಿಗಳು, ಗ್ರಂಥಾಲಯ, ಗಣಕಯಂತ್ರ, ಪ್ರಾಂಶುಪಾಲರ ಕೊಠಡಿ, 2 ಸಿಬ್ಬಂದಿ ಕೊಠಡಿ, ಯೋಗ ಕೊಠಡಿ, ಉಗ್ರಾಣ, 2 ಪ್ರಯೋಗಾಲಯ ಕೊಠಡಿಗಳ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.
ಬಾಲಕಿಯರ ಹಾಗೂ ಬಾಲಕರ ವಸತಿ ನಿಲಯದಲ್ಲಿ ತಲಾ 12 ವಿದ್ಯಾರ್ಥಿ ಕೊಠಡಿ, ನಿಯಮ ಪಾಲಕರ ಕೊಠಡಿ, ಸಾಮಾನ್ಯ ಕೊಠಡಿ, ಉಗ್ರಾಣ, ವಿದ್ಯಾರ್ಥಿಗಳ ಅನಾರೋಗ್ಯ ಕೊಠಡಿ, 12 ಶೌಚಾಲಯಗಳು, 16 ಸ್ನಾನದ ಕೊಠಡಿ ನಿರ್ಮಾಣ ಮಾಡಲಾಗುವುದು ಎಂದರು. ಎಸ್.ಆರ್.ಕನ್ಟ್ರಕ್ಷನ್ ಕಂಪನಿಗೆ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ ಎಂದರು. ಒಂದು ವರ್ಷ ಅವಧಿಯಲ್ಲಿ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಗುತ್ತಿಗೆದಾರ ಸುಬ್ಬಾರೆಡ್ಡಿಯವರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯ್ತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎ.ಬಿ.ಜಗದೀಶ್, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಪ್ರಭಾರ ಸಮಾಜ ಕಲ್ಯಾಣಾಧಿಕಾರಿ ಜಯಪ್ರಕಾಶ್, ಗುತ್ತಿಗೆದಾರ ಸುಬ್ಬಾರೆಡ್ಡಿ, ತಾಲ್ಲೂಕು ಪಂಚಾಯ್ತಿ ಸದಸ್ಯೆ ನಾಗಮಣಿ ಲಕ್ಷ್ಮಣಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಸ್ವಾಮಿ ಮೊದಲಾದವರು ಗುದ್ದಲಿ ಪೂಜಾ ಸಮಾರಂಭದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

