ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಸಿಬ್ಬಂದಿ ಭೇಟಿ ನಿರ್ಬಂಧಿಸಿ
ತುಮಕೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಸಿಬ್ಬಂದಿ ಭೇಟಿ ನಿರ್ಬಂಧಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಂ. ಸಣ್ಣಮುದ್ದಯ್ಯ ಅಭಿಪ್ರಾಯಪಟ್ಟಿದ್ದಾರೆ.
ಅವರು ಸತತ ಐದನೇ ಬಾರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಬಳಿಕ ಶಾಸಕ ಡಾ. ರಫೀಕ್ ಅಹಮದ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ನಿರ್ಬಂದ ಆಗದಿದ್ದರೆ ಸಿಬ್ಬಂದಿ ಭೇಟಿಗೆ ಸಮಯ ನಿಗದಿಗೊಳಿಸಬೇಕು. ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳಿಗೆ ಸಿಬ್ಬಂದಿಯನ್ನು ಭೇಟಿ ಮಾಡುವ ಬದಲು ಅಧಿಕಾರಿಗಳನ್ನು ಭೇಟಿ ಮಾಡಬೇಕು ಎಂದು ಸಣ್ಣಮುದ್ದಯ್ಯ ಅಭಿಪ್ರಾಯಪಟ್ಟರು.
ಕಚೇರಿ ಅವಧಿಯಲ್ಲಿ ಸಾರ್ವಜನಿಕರು ಸಿಬ್ಬಂದಿ ಭೇಟಿ ಮಾಡುವುದರಿಂದ ಸಿಬ್ಬಂದಿಯ ಕರ್ತವ್ಯಕ್ಕೆ ಅಡಚಣೆಯುಂಟಾಗುತ್ತದೆ. ಜತೆಗೆ ಕಾಲಹರಣವಾಗುತ್ತದೆ. ಇದರಿಂದ ಮಧ್ಯವರ್ತಿಗಳಿಗೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂದು ತಿಳಿಸಿದರು.
ಮಧ್ಯವರ್ತಿ ನಿಯಂತ್ರಿಸಬಹುದು: ಸಾರ್ವಜನಿಕರು ಕಚೇರಿಗಳಲ್ಲಿ ಸಿಬ್ಬಂದಿಯನ್ನು ಭೇಟಿ ಮಾಡುವ ಬದಲು ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆ, ಅಹವಾಲುಗಳನ್ನು ಸಲ್ಲಿಸಬೇಕು. ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳನ್ನು ನಿಯಂತ್ರಿಸಬಹುದು ಎಂದು ತಿಳಿಸಿದರು.
ಬೆಂಗಳೂರಿನ ಕೆಲ ಕಚೇರಿಗಳಲ್ಲಿ ಇರುವಂತೆ ಸಾರ್ವಜನಿಕರ ಕಚೇರಿ ಭೇಟಿಗೆ ಸಮಯ ನಿಗದಿ ಮಾಡಬೇಕು ಎಂದ ಅವರು ತಮ್ಮ ಮನವಿಯನ್ನು ಸರ್ಕಾರಕ್ಕೆ ತಲುಪಿಸಬೇಕು ಎಂದು ಶಾಸಕ ರಫೀಕ್ ಅಹಮದ್ ಅವರಿಗೆ ತಿಳಿಸಿದರು.
ಎಲ್ಲಾ ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. 35-40 ವರ್ಷಗಳ ಹಿಂದೆ ಮಂಜೂರಾದ ಸಿಬ್ಬಂದಿ ಹುದ್ದೆ ಈಗಿನ ಜನಸಂಖ್ಯೆಗೆ ಅನುಗುಣವಾಗಿಲ್ಲ. ಹೀಗಾಗಿ ಸಿಬ್ಬಂದಿಗೆ ಸಾರ್ವಜನಿಕರ ಒತ್ತಡ ಹೆಚ್ಚಾಗಿದೆ ಎಂದರು. ಹಾಗಾಗಿ ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಸಬೇಕು ಎಂದರು.
ಸಂಘದ ಜಿಲ್ಲಾ ಖಜಾಂಚಿ ಲೋಕೇಶ್, ಪ್ರಧಾನ ಕಾರ್ಯದರ್ಶಿ ಕುಮಾರ್, ರಾಜ್ಯ ಪರಿಷತ್ ಸದಸ್ಯ ಸತೀಶ್ಕುಮಾರ್, ಪದಾಧಿಕಾರಿಗಳಾದ ವೀರಣ್ಣ, ನಂಜುಂಡಯ್ಯ, ಸಿದ್ದಲಿಂಗಸ್ವಾಮಿ, ರವೀಂದ್ರನಾಥ ಕುಮಾರ್, ಸುಭಾನ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

