ತುಮಕೂರು

'ಒಕ್ಕಲಿಗರ ಸಂಘದ ವತಿಯಿಂದ ಪಾಲಿಟೆಕ್ನಿಕ್ ಕಾಲೇಜು'

Published On :

ಶಿರಾ: ಶಿರಾದಲ್ಲಿ ಬರುವ ವರ್ಷ ಪಾಲಿಟೆಕ್ನಿಕ್ ಕಾಲೇಜನ್ನು ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಪ್ರಾರಂಭಿಸಲಾಗುವುದು ಎಂದು ರಾಜ್ಯ ಒಕ್ಕಲಿಗ ಸಂಘದ ಜಂಟಿ ಕಾರ್ಯದರ್ಶಿಗಳಾದ ಯಲಚವಾಡಿ ನಾಗರಾಜ್ ತಿಳಿಸಿದರು.
ಅವರು ಶೀಘ್ರವಾಗಿ ನಡೆಯಲಿರುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ತಾಲೂಕು ಕುಂಚಿಟಿಗರ ಸಂಘದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಮುಂದೆ ಪ್ರತಿ ತಾಲೂಕಿನಲ್ಲಿ ಉಚಿತ ಬಾಲಕಿಯರ ವಿದ್ಯಾರ್ಥಿ ನಿಲಯ ಸ್ಥಾಪಿಸಲಾಗುವುದು. ಪ್ರತಿ ತಾಲೂಕಿನಲ್ಲಿ ಕುವೆಂಪು ವೈಚಾರಿಕ ಪ್ರಜ್ಞೆ ಕೇಂದ್ರಗಳ ಸ್ಥಾಪನೆ, ಅದೇ ರೀತಿ ತಾಲೂಕುಗಳಲ್ಲೆಲ್ಲ ಕುವೆಂಪು ಅವರ ಪುತ್ಥಳಿ ಅನಾವರಣ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಎಂದರು.
ಬೆಂಗಳೂರಿನಲ್ಲಿರುವ ಕೆಂಪೇಗೌಡ ಮೆಡಿಕಲ್ ಕಾಲೇಜಿನಲ್ಲಿ ಸಂಘದ ಸದಸ್ಯರಿಗೆ ಶೇ. 30 ರ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡುವುದು. ಜನಾಂಗದ ಸಂಘಟನೆಗೋಸ್ಕರ ಆದಿಚುಂಚನಗಿರಿ ಶ್ರೀಗಳ ಗುರುವಂದನೆ ಕಾರ್ಯಕ್ರಮ ಇನ್ನೂ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಯಲಚವಾಡಿ ನಾಗರಾಜ್ ಅವರು ಈ ಭಾರಿಯೂ ಚುನಾವಣೆಯಲ್ಲಿ ಜಿಲ್ಲೆಯಿಂದ ಸ್ಪ್ರ್ಧಿಸಲಾಗುವುದು. ನನ್ನನ್ನು ಬೆಂಬಲಿಸಿ ಎಂದು ಕೋರಿದರು.
ತಾಲೂಕಿನ ಸಂಘದ ಸದಸ್ಯರುಗಳಿಗೆ ಗುರುತಿನ ಚೀಟಿಗಳನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಕುಂಚಿಟಿಗರ ಸಂಘದ ಅಧ್ಯಕ್ಷರಾದ ಗುಳಿಗೇನಹಳ್ಳಿ ನಾಗರಾಜು, ನಿರ್ದೆಶಕರುಗಳಾದ ಡಿ.ಸಿ.ಅಶೋಕ್, ಜಂಜಯ್ಯ, ಸುಧಾಕರ ಗೌಡ, ಮಾಜಿ ಜಿ.ಪಂ. ಸದಸ್ಯರಾದ ಪಿ.ಆರ್.ಮಂಜುನಾಥ್ ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.