ಪ್ರತಿಭೆಯೇ ವಿದ್ಯಾರ್ಥಿಗಳ ಸ್ವತ್ತು
ಕ.ಪ್ರ.ವಾರ್ತೆ ತುಮಕೂರು ಆ.11
ಪ್ರತಿಭೆಯೇ ವಿದ್ಯಾರ್ಥಿಗಳ ಸ್ವತ್ತು ಎಂದು ಸಪ್ತಗಿರಿ ಪ.ಪೂ. ಕಾಲೇಜಿನ ಆಡಳಿತಾಧಿಕಾರಿ ಅರ್ಚನಾ ಎಸ್. ಕುಮಾರ್ ಅಭಿಪ್ರಾಯಪಟ್ಟರು.
ಅವರು ನಗರದ ಸಪ್ತಗಿರಿ ಪ.ಪೂ. ಕಾಲೇಜಿನಲ್ಲಿ ಅಂಕುರ-2013 ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿಭೆ ಮತ್ತು ಪರಿಶ್ರಮ ವಿದ್ಯಾರ್ಥಿಗಳನ್ನು ಸಾಕಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ. ಹಾಗಾಗಿ ಶೈಕ್ಷಣಿಕ ಜೀವನವನ್ನು ಹಸನು ಮಾಡಿಕೊಳ್ಳಬೇಕಾದರೆ ವಿದ್ಯಾರ್ಥಿಗಳ ಪರಿಶ್ರಮ ಅಷ್ಟೆ ಮುಖ್ಯ ಎಂದರು.
ವಿದ್ಯಾರ್ಥಿಗಳು ಶಾಲೆಯಲ್ಲಿ ಗುರುಗಳು ಹೇಳಿಕೊಟ್ಟ ಪಾಠವನ್ನು ಮನನ ಮಾಡುವುದರ ಜತೆಗೆ ನಿರಂತರವಾಗಿ ಅಧ್ಯಯನ ಶೀಲರಾಗಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಿ ತಾವು ಅಂದುಕೊಂಡಿದ್ದ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದರು.
ರೇಣುಕಾ ವಿದ್ಯಾಪೀಠ ಪ.ಪೂ.ಕಾಲೇಜಿನ ಪ್ರಾಂಶುಪಾಲ ಚೆನ್ನಪ್ಪ ಬಾರಿಗಿಡದ್ ಮಾತನಾಡಿ ಪ್ರತಿಭಾವಂತನೆ ವಿಶ್ವದ ಸಿರಿವಂತ ಎಂದು ಅಭಿಪ್ರಾಯಪಟ್ಟರು. ನಿವೃತ್ತ ಪ್ರಾಂಶುಪಾಲ ಪದ್ಮನಾಭರಾವ್ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುಣ ಸಂಪತ್ತುಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯೆಯ ಜತೆಗೆ ವಿನಯ ಕೂಡ ವಿದ್ಯಾರ್ಥಿಯ ಭವಿಷ್ಯತ್ತಿನ ಬೆಳವಣಿಗೆಗೆ ಪೂರಕವಾಗಲಿದೆ ಎಂದು ತಿಳಿಸಿದರು.
ಡಿ.ಎಸ್. ಕುಮಾರ್, ಡಾ. ಎಚ್.ಎಸ್. ನಿರಂಜನಾರಾಧ್ಯ ಮುಂತಾದವರು ಇದ್ದರು. 2012ನೇ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಅನುರಾಧ ಅವರು ವಿದ್ಯಾರ್ಥಿಗಳ ಪಟ್ಟಿಯನ್ನು ವಾಚಿಸಿದರು. ಅನಂತ ನಾರಾಯಣ ಕೌಶಿಕ್ ಪ್ರಾರ್ಥಿಸಿದರು. ಡಾ. ಪಿ.ಆರ್. ರೇಣುಕಾ ಪ್ರಸಾದ್ ನಿರೂಪಿಸಿದರು.
ಪೂರ್ಣಿಮಾ ವೆಂಕಟೇಶ್ ಸ್ವಾಗತಿಸಿದರು. ಶ್ರೀನಾಥ್ ವಂದಿಸಿದರು. ವಸುಧ ಹಾಗೂ ತಂಡ ವಂದೇ ಮಾತರಂ ಹಾಡುವುದರ ಮೂಲಕ ಕಾರ್ಯಕ್ರಮ ಸಮಾಪ್ತಿಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

