ಮಹಿಳೆಯರಿಗೆ ಕಾನೂನು ಅರಿವು ಅಗತ್ಯ: ಕೆ. ಷಡಕ್ಷರಿ
ಕ.ಪ್ರ.ವಾರ್ತೆ ತಿಪಟೂರು ಆ. 12
ದೇಶದ ಸರ್ವಾಂಗೀಣ ಪ್ರಗತಿಗೆ ಮಹಿಳೆಯರ ಅದರಲ್ಲೂ ಸುಶಿಕ್ಷಿತ ಹೆಣ್ಣು ಮಕ್ಕಳ ಅಗತ್ಯತೆ ಮತ್ತು ಕೊಡುಗೆ ಬಹಳ ಮುಖ್ಯವಾಗಿರುವುದರಿಂದ ಸಿಕ್ಕ ಅವಕಾಶ ಬಳಸಿಕೊಂಡು ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕೆಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ಕೋಶದ ವತಿಯಿಂದ ಮಹಿಳೆಯರ ಹಕ್ಕು ಬಾಧ್ಯತೆಗಳು ಮತ್ತು ಹದಿಹರೆಯದವರ ಸಮಸ್ಯೆಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ಸಮಾನತೆ ಸಾರುವ ಸಮಾಜದ ನಿರ್ಮಾಣಕ್ಕೆ ಯುವಕ, ಯುವತಿಯರ ಪಾತ್ರ ಹೆಚ್ಚಿನದಾಗಿದ್ದು, ದಿನ ನಿತ್ಯದ ಮತ್ತು ಸ್ವಾಭಿಮಾನಿ ಬದುಕಿಗೆ ಅಗತ್ಯವಿರುವ ಕನಿಷ್ಠ ಕಾನೂನು ಜ್ಞಾನಗಳ ಅರಿವು ಬಹಳ ಮುಖ್ಯ. ಜೊತೆಗೆ ಹಿರಿಯ ದಾರ್ಶನಿಕರುಗಳಾದ ಬಸವಣ್ಣ, ಅಕ್ಕಮಹಾದೇವಿಯವರ ಆದರ್ಶಗಳನ್ನು ಬದುಕಿಗೆ ಅಳವಡಿಸಿಕೊಂಡು ಸ್ತ್ರೀಸಮಾನತೆಯನ್ನು ಎತ್ತಿಹಿಡಿಯಬೇಕೆಂದರು.
ಚಿಕ್ಕನಾಯಕನಹಳ್ಳಿ ತಾಲೂಕಿನ ವಕೀಲರಾದ ಎಂ.ವಿ. ನಾಗರಾಜ್ ಮಹಿಳೆಯರ ಹಕ್ಕು ಬಾಧ್ಯತೆಗಳ ಬಗ್ಗೆ ಹಾಗೂ ಸಹಾಯಕ ಪ್ರಾಧ್ಯಾಪಕರಾದ ಬಿ. ವಿಜಯಲಕ್ಷ್ಮಿ ಹದಿಹರೆಯದವರ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಜಯದೇವಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಯೋಜನಾಧಿಕಾರಿ ಹಾಗೂ ಸಹ ಪ್ರಾಧ್ಯಾಪಕಿ ಪ್ರೊ. ಜ್ಯೋತಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

