ತುಮಕೂರು

ನಾಳೆ ಗೊರವನಹಳ್ಳಿಯಲ್ಲಿ ವಿಶೇಷ ಪೂಜೆ

Published On :

ಕೊರಟಗೆರೆ, ಆ.14 ಶ್ರೀ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಲ್ಲಾ ಭಕ್ತಾದಿಗಳಿಗೂ ಸುಲಭವಾಗಿ ಶ್ರೀ ತಾಯಿಯ ದರ್ಶನಕ್ಕಾಗಿ ಸರತಿಯ ಸಾಲು ಏರ್ಪಡಿಸಿದೆ. ಅಂದು ಹಬ್ಬದ ಪ್ರಯುಕ್ತ ವಿಶೇಷವಾಗಿ ಪಂಚಾಮೃತ ಅಭಿಷೇಕ, ಶ್ರೀ ಮಹಾಲಕ್ಷ್ಮಿ ಹೋಮ, ವಿಶೇಷ ಹೂವಿನ ಅಲಂಕಾರ ಹಾಗೂ ಭಕ್ತಾದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಪ್ಲಾಟ್ ಫಾರಂ 3 ರಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.



ಉಪ ಲೋಕಾಯುಕ್ತರ ಭೇಟಿ
ತಿಪಟೂರು: ನಗರದ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಆ.17ರ ಶನಿವಾರ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳು ಭೇಟಿ ನೀಡಿ ಸಾರ್ವಜನಿಕರಿಂದ ಲೋಕಾಯುಕ್ತ ಕಚೇರಿಗೆ ಸ್ವೀಕೃತವಾದ ದೂರುಗಳ ವಿಚಾರಣೆ ನಡೆಸಲಿದ್ದಾರೆ.  ಆದ್ದರಿಂದ ಸಾರ್ವಜನಿಕರು ಈ ಸಂದರ್ಭದವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ತಿಳಿಸಿದ್ದಾರೆ.  

ಕಾಂಪೌಂಡ್ ನಿರ್ಮಿಸಲು 12 ಅಡಿ ರಸ್ತೆ ಒತ್ತುವರಿ: ಆರೋಪ


ಪಾವಗಡ: ಪಟ್ಟಣದ ಪ್ರಭಾವಿ ವ್ಯಕ್ತಿ ಹಾಗೂ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಯೊಬ್ಬರು ವಿದ್ಯಾ ಸಂಸ್ಥೆಗೆ ಕಾಂಪೌಂಡ್ ನಿರ್ಮಿಸಲು  12 ಅಡಿ ರಸ್ತೆ ಒತ್ತುವರಿ ಮಾಡಿಕೊಂಡು ಪಾಯ ತೆಗೆಸಿದ್ದು ದೂರು ನೀಡಿದರೂ ಕ್ರಮ ಜರುಗಿಸುವಲ್ಲಿ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯತೋರಿದ್ದಾರೆಂದು ಶ್ರೀನಿವಾಸ ನಗರದ ಸಾರ್ವಜನಿಕರು ಆರೋಪಿಸಿದ್ದಾರೆ.
ಪಟ್ಟಣದ ಪ್ರಭಾವಿ ವ್ಯಕ್ತಿ ಹಾಗೂ  ಶ್ರೀ ವಿವೇಕಾನಂದ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಡಾ.ಜಿ.ವೆಂಕಟರಾಮಯ್ಯ ಎಂಬುವವರು ಈ ಕೆಲಸ ಮಾಡಿದ್ದಾರೆ ಎಂದು ಶ್ರೀನಿವಾಸ ನಗರದ ನಾಗರಾಜ್ ಆರೋಪಿಸಿದದಾರೆ. ಸಂಬಂಧಪಟ್ಟವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆ ಪರಿಹರಿಸುವಂತೆ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.