ತುಮಕೂರು

ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ

Published On :

ಕ.ಪ್ರ.ವಾರ್ತೆ  ಕುಣಿಗಲ್  ಆ.14
ತುಮಕೂರು ಜಿಲ್ಲಾಡಳಿತದ ವತಿಯಿಂದ ನಾಳೆ  ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಗೆ ಮಹಾತ್ಮಗಾಂಧಿ ಕ್ರೀಡಾಂಗಣ ಸಕಲ ರೀತಿಯಲ್ಲೂ ಸಜ್ಜಾಗಿದೆ.
ಈಗಾಗಲೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಶಾಲೆ ಮಕ್ಕಳು ಒಂದೆಡೆ ಕಲಿತು ನೃತ್ಯ ಮುಂತಾದ ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ನಾಳೆ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ರಾಷ್ಟ್ರ ಧ್ವಜಾರೋಹಣ ಮಾಡಿ ಗೌರವರಕ್ಷೆ ಸ್ವೀಕರಿಸುವರು.  ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಶಾಲಾ ಮಕ್ಕಳಿಂದ ಸಾಮೂಹಿಕ ಕವಾಯತು ಕಾರ್ಯಕ್ರಮ ಏರ್ಪಡಿಸಿದೆ.
ಬೆಳಿಗ್ಗೆ 8-30ಕ್ಕೆ ಶಾಲಾ ಕಾಲೇಜು  ವಿದ್ಯಾರ್ಥಿಗಳು, ಕವಾಯಿತು ತಂಡಗಳು, ಆಹ್ವಾನಿತರು ಮತ್ತು ಸಾರ್ವಜನಿಕರು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಸೇರುವರು. 9 ಗಂಟೆಗೆ ಧ್ವಜಾರೋಹಣ, 9.05ಕ್ಕೆ ಗೌರವರಕ್ಷೆ ಸ್ವೀಕಾರ, 9.15 ಕ್ಕೆ ಸ್ವಾತಂತ್ರ್ಯೋತ್ಸವ ಸಂದೇಶ, 9.30ಕ್ಕೆ ಸಾಮೂಹಿಕ ಕವಾಯಿತು, 9.45 ಕ್ಕೆ ಸನ್ಮಾನ ಕಾರ್ಯಕ್ರಮ, 10 ಗಂಟೆಗೆ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ.
ಸಂಜೆ 5 ಗಂಟೆಗೆ ಡಾ. ಗುಬ್ಬಿ ವೀರಣ್ಣ ಕಲಾಮಂದಿರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ  ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಎಸ್. ರಫೀಕ್ ಅಹಮದ್ ಅವರು ಅಧ್ಯಕ್ಷತೆ ವಹಿಸುವರು.  ಮತ್ತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.  



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.