ತುಮಕೂರು

ಹುಳಿಯಾರು ಗ್ರಾ.ಪಂ.ನಿಂದ ಸ್ವಾತಂತ್ರ್ಯ ದಿನಾಚರಣೆ

Published On :

ಹುಳಿಯಾರು: ಇಲ್ಲಿನ ಗ್ರಾಮಪಂಚಾಯ್ತಿವತಿಯಿಂದ ಸ್ವಾತಂತ್ರ್ಯ ದಿನಾಚಾರಣೆ ಅಂಗವಾಗಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಉಪತಹಸೀಲ್ದಾರ್ ಎಚ್.ಬಿ. ಬಸವರಾಜು ಧ್ವಜಾರೋಹಣ ನೆರವೇರಿಸಲಿದ್ದು, ಗ್ರಾ.ಪಂ.ಅಧ್ಯಕ್ಷೆ ಪುಟ್ಟಮ್ಮ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಂಸದ ಬಸವರಾಜು, ಶಾಸಕ ಸಿ.ಬಿ. ಸುರೇಶ್ ಬಾಬು, ವಿಧಾನ ಪರಿಷತ್ತು ಸದಸ್ಯ ಹುಲಿನಾಯ್ಕರ್, ಮಾಜಿ ಶಾಸಕರಾದ ಕೆ.ಎಸ್. ಕಿರಣ್ ಕುಮಾರ್, ಜೆ.ಸಿ.ಮಾಧುಸ್ವಾಮಿ, ಮಾಜಿ ವಿಧಾಸಭಾ ಸದಸ್ಯ ಲಕ್ಕಪ್ಪ, ಜಿ.ಪಂ.ಸದಸ್ಯೆ ಮಂಜುಳಾ, ತಾ.ಪಂ.ಅಧ್ಯಕ್ಷ ಶಶಿಧರ್, ಉಪಾಧ್ಯಕ್ಷ ರಮೇಶ್, ತಾ.ಪಂ.ಸದಸ್ಯರಾದ ಬೀಬೀ ಫಾತೀಮಾ, ನವೀನ್, ಗ್ರಾ.ಪಂ.ಉಪಾಧ್ಯಕ್ಷೆ ಅಬೀದುನಿಸಾ, ವೈದ್ಯಾಧಿಕಾರಿ ಮಂಜುನಾಥ್, ಪಿಎಸೈ ರಾಜು, ಬೆಸ್ಕಾಂನ ಉಮೇಶ್ ನಾಯ್ಕ, ಕಂದಾಯ ತನಿಖಾಧಿಕಾರಿ ರಂಗನಾಥ್, ಎಪಿಎಂಸಿ ಅಧ್ಯಕ್ಷ ಶಿವರಾಜ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ತಿಮ್ಮಯ್ಯ ಹಾಗೂ  ಗ್ರಾ.ಪಂ ಸದಸ್ಯರು, ಹೋಬಳಿಯ ಕನ್ನಡ ಪರಸಂಘಟನೆಗಳು, ದಲಿತಪರ ಸಂಘಟನೆಗಳು ಸೇರಿದಂತೆ  ವಿವಿಧ ಸಂಘ ಸಂಸ್ಥೆಯವರು ಆಗಮಿಸಲಿದ್ದಾರೆ. ಈ ಸಂಧರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.