'ತ್ಯಾಗಿಗಳನ್ನು ಸ್ಮರಿಸುವುದು ಭಾರತೀಯರ ಕರ್ತವ್ಯ'
ತಿಪಟೂರು: ಸ್ವಾತಂತ್ರ್ಯಕ್ಕಾಗಿ ದೇಶಭಕ್ತರು ಕೆಚ್ಚೆದೆಯಿಂದ ಹೋರಾಡಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದು, ಅಂತಹ ಲಕ್ಷಾಂತರ ದೇಶಭಕ್ತರನ್ನು ಸ್ಮರಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ದೇಶವನ್ನು ಅಭಿವೃದ್ಧಿಯತ್ತ ಕಂಡೊಯ್ಯಲು ಪ್ರತಿಯೊಬ್ಬ ಭಾರತೀಯ ತಮ್ಮನ್ನು ತಾವು ಸಮರ್ಪಿಸಿಕೊಂಡು ದೇಶದ ಋಣ ತೀರಿಸಬೇಕೆಂದು ಉಪವಿಭಾಗಾಧಿಕಾರಿ ಎಂ.ಶಿಲ್ಪ ನಗರದ ಕಲ್ಪತರು ಕ್ರೀಡಾಂಗಣದಲ್ಲಿ ನಡೆದ 67ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೆ. ಷಡಕ್ಷರಿ ಭಾರತಕ್ಕೆ ಸ್ವಾತಂತ್ರ್ಯ ಬಂದು 67 ವರ್ಷಗಳು ಕಳೆದರೂ ದೇಶ ಆರ್ಥಿಕವಾಗಿ ಹಿಂದುಳಿದಿದ್ದು, ರಾಷ್ಟ್ರದ ಆರ್ಥಿಕ ಸಬಲೀಕರಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಸಂಪತ್ ಭರಿತ ಭಾರತ ದೇಶ ಪರಕೀಯರ ದಾಸ್ಯದಿಂದ ಮುಕ್ತಿ ಪಡೆಯಲು ಮಹಾತ್ಮಗಾಂಧೀಜಿ, ನೆಹರು, ಸುಭಾಷ್ಶ್ಚಂದ್ರಬೋಸ್ ಸೇರಿದಂತೆ ಲಕ್ಷಾಂತರ ದೇಶಭಕ್ತರ ತ್ಯಾಗ, ಬಲಿದಾನದ ಫಲದಿಂದಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ಆದರೆ ಭಾರತ ಆರ್ಥಿಕವಾಗಿ ಸಬಲೀಕರಣವಾಗಬೇಕಿದೆ ಎಂದರು.
ಪಿ.ಎಸ್.ಐ ಕೊಟ್ರೇಶ್ ನೇತೃತ್ವದಲ್ಲಿ ಪರೆಡ್ ನಡೆಯಿತು. ಹೊನ್ನವಳ್ಳಿ ಹೋಬಳಿ ಪಿ.ಎಸ್.ಐ ಸುಂದರ್, ಕಸಬಾ ಪಿ.ಎಸ್.ಐ ಮಲ್ಲೇಶ್, ಗೃಹ ರಕ್ಷಕ ದಳ, ನಗರದ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

