ತುಮಕೂರು

ನಾಳೆ ಹೆಚ್ಎಂಟಿ ವಿಆರ್ಎಸ್ ನೌಕರರ ಸಭೆ

Published On :

ತುಮಕೂರು: ಇಲ್ಲಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆ.18 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಹೆಚ್ಎಂಟಿ ವಿಆರ್ಎಸ್ ನೌಕರರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಮುಖ್ಯವಾಗಿ ಪಿಂಚಣಿ ಮತ್ತು ಗ್ರಾಚ್ಯುಟಿ ವಿಚಾರವಾಗಿ ಚರ್ಚಿಸಬೇಕಾಗಿರುವುದರಿಂದ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ವಿ.ಆರ್ಎಸ್ ಪಡೆದಿರುವ ನೌಕರ ಸಹೋದರರು ಈ ಸಭೆಗೆ ಹಾಜರಾಗಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜಿ. ನರಸಿಂಹಮೂರ್ತಿ ತಿಳಿಸಿದ್ದಾರೆ.
ಮಾನಸ ಸರೋವರಕ್ಕೆ ಕಾಡುಸಿದ್ದೇಶ್ವರ ಸ್ವಾಮೀಜಿ
ತಿಪಟೂರು ತಾಲೂಕು ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಅವರು ಲೋಕ ಕಲ್ಯಾಣಾರ್ಥಕ್ಕಾಗಿ ಶ್ರಾವಣ ಮಾಸದ ಸಂಕಲ್ಪ ಯಾತ್ರೆಗೆ ಮಾನಸ ಸರೋವರದಲ್ಲಿ ತಪೋನುಷ್ಠಾನಕ್ಕಾಗಿ ತಮ್ಮ ಶಿಷ್ಯರೊಂದಿಗೆ ಮಾನಸ ಸರೋ ವರಕ್ಕೆ ತೆರಳುತ್ತಿದ್ದಾರೆ. 18 ದಿವಸಗಳ ನಂತರ ಶ್ರೀ ಮಠಕ್ಕೆ ವಾಪಾಸಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.