'ಬಿಜೆಪಿಗೆ ಅಭ್ಯರ್ಥಿ ಕಣಕ್ಕಿಳಿಸುವ ಯೋಗ್ಯತೆ ಇಲ್ಲ'
ಕ.ಪ್ರ.ವಾರ್ತೆ ಕುಣಿಗಲ್ ಆ. 16
ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಬಿಇ ಎಲೆಕ್ಟ್ರಾನಿಕ್ಸ್ ಪದವಿಧರರಾಗಿ, ಆಂಗ್ಲಭಾಷೆ ಜ್ಞಾನ ಉಳ್ಳವರಾಗಿದ್ದು ಕೇಂದ್ರದಲ್ಲಿ ಗ್ರಾಮಾಂತರ ಲೋಕಸಭೆಯನ್ನು ಪ್ರತಿನಿಧಿಸುವ ಎಲ್ಲಾ ಅರ್ಹತೆಯನ್ನು ಹೊಂದಿರುವ ಕಾರಣ ಅನಿತಾಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಜೆಡಿಎಸ್ ಮುಖಂಡ, ವಿಧಾನಪರಿಷತ್ ಸದಸ್ಯ ಅಬ್ದುಲ್ ಅಜೀಂ ಮನವಿ ಮಾಡಿದರು.
ಶುಕ್ರವಾರ ಸಂಜೆ ಪಟ್ಟಣದ ಖಾಸಗಿ ಸಮುದಾಯಭವನದಲ್ಲಿ ಹಮ್ಮಿಕೊಳ್ಳಲಾದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭೆ ಉಪಚುನಾವಣೆಗಳು ನಡೆಯುತ್ತಿರುವುದು ಅನಿತಾ ಕುಮಾರಸ್ವಾಮಿ ಮತ್ತು ಡಿ.ಕೆ.ಸುರೇಶ್ ನಡುವೆ ಅಲ್ಲ. ಅದು ನಡೆಯುತ್ತಿರುವುದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ನಡುವೆ, ರೈತಪರ, ಜನಪರ ಕಾಳಜಿ ಹೊಂದಿರುವ ಜೆಡಿಎಸ್ಗೆ ಬೆಂಬಲಿಸುವಂತೆ ಮನವಿ ಮಾಡಿದ ಅವರು, ರಾಷ್ಟ್ರೀಯ ಪಕ್ಷವೆಂದು ಫೋಸು ಕೊಡುತ್ತಿರುವ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಗ್ಯತೆ ಇಲ್ಲದ ಸ್ಥಿತಿಗೆ ತಲುಪಿದೆ. ಈಗ ಇದನ್ನೆ ಬಂಡವಾಳ ಮಾಡಿಕೊಂಡ ಕಾಂಗ್ರೆಸ್ ಪಕ್ಷದವರು ಜೆಡಿಎಸ್- ಬಿಜೆಪಿ ಒಳಒಪ್ಪಂದ ಎಂದು ವದಂತಿ ಹಬ್ಬಿಸುತ್ತಿರುವುದು ನಿಜಕ್ಕೂ ಅವರ ಅಸಹಾಯ ಕತೆ ತೋರಿಸುತ್ತದೆ. ಕಾರ್ಯಕರ್ತಕರು ಈ ವಿಷಯವನ್ನು ಮತದಾರರಿಗೆ ಅರಿವಾಗುವಂತೆ ಹೇಳಿ ಪಕ್ಷದ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕೆಂದರು.
ಜೆಡಿಎಸ್ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ, ಡ್ಯಾನಿಷ್ ಅಲಿ, ಮಳೆ ಪ್ರಾರಂಭವಾಗುವ ಸಮಯದಲ್ಲಿ ದೇಶದಲ್ಲಿ ಚುನಾವಣೆ ನಡೆದಿರುವ ಉದಾಹರಣೆಗಳಿಲ್ಲ, ಆದರೆ ಯುಪಿಎ ಸರ್ಕಾರ ರಾಜ್ಯದಲ್ಲಿ ಬಲವಂತವಾಗಿ ಉಪಚುನಾವಣೆಯಿಂದ ಜನತೆಯ ಮೇಲೆ ಹೊರೆ ಹೇರಿದೆ, ಆದರೂ ಚಿಂತೆ ಇಲ್ಲ, ಈ ಉಪಚುನಾವಣೆಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲವು ನಿಶ್ಟಿತವಾಗಿದ್ದು, ಈ ಚುನಾವಣೆ ಫಲಿತಾಂಶ ಮುಂಬರುವ ದಿನಗಳಲ್ಲಿ ರಾಜ್ಯ ರಾಜಕಾರಣ ಸೇರಿದಂತೆ ದೇಶದ ರಾಜಕಾರಣದಲ್ಲಿ ಹಲವು ಪರಿಣಾಮ ಬೀರಲಿದೆ ಎಂದರು. ಶಾಸಕ ಡಿ.ನಾಗರಾಜಯ್ಯ , ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಶಕೀಲ್ ನವಾಜ್, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಲ್.ಹರೀಶ್, ಮುಖಂಡರಾದ ಆಯಿಶಾಬೀ, ಹಮೀದ್, ಸಮೀವುಲ್ಲಾ, ಅನ್ಸರ್, ಸದಾಖತ್, ಭೈರಪ್ಪ, ರಂಗಣ್ಣ ಪುರಸಭೆ ಸದಸ್ಯರಾದ ಈ.ಮಂಜು, ಸತೀಶ್, ಚಂದ್ರಶೇಖರ್, ಇತರರು ಪಾಲ್ಗೊಂಡಿದ್ದರು.,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

