ತುಮಕೂರು

21ರಂದು ಸಂಸ್ಕೃತೋತ್ಸವ

Published On :

ಚಿಕ್ಕನಾಯಕನಹಳ್ಳಿ: ತುಮಕೂರು ಮಂಡಲ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದಿಂದ ವಿಶ್ವವಿದ್ಯಾಲಯ ಹಂತದ ಸಂಸ್ಕೃತೋತ್ಸವನ್ನು ಆ. 21ರಂದು ಹಮ್ಮಿಕೊಳ್ಳಲಾಗಿದೆ ಎಂದು ತಿಪಟೂರು ತಾಲೂಕು ಕಿಬ್ಬನಹಳ್ಳಿ ಕ್ರಾಸ್ ಬಳಿಯಿರುವ ಗೋಡಕೆರೆ ಸಿದ್ದರಾಮದೇಶೀಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆ. 21 ಬುಧವಾರ ಬೆಳಗ್ಗೆ 9 ಗಂಟೆಗೆ ಶೋಭಾಯಾತ್ರೆ, 10 ಗಂಟೆಗೆ ತುಮಕೂರು ಮಂಡಲ ಸಂಸ್ಕೃತ ಪಾಠಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿದ್ವಾನ್ ಎಂ.ಆರ್. ಶಿವರುದ್ರಪ್ಪ ಅವರು ಧ್ವಜಾರೋಹಣ ನೆರವೇರಿಸುವರು. 10.30ಕ್ಕೆ ಸಿದ್ದರಾಮೇಶ್ವರ ಸ್ವಾಮೀಜಿ, ಗುರುಪರದೇಶಿಕೇಂದ್ರ ಸ್ವಾಮೀಜಿ, ಡಾ. ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ತಿಪಟೂರು ಶಾಸಕರಾದ ಕೆ. ಷಡಕ್ಷರಿ ಅವರು ಸಮಾರಂಭವನ್ನು ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ನಿರ್ದೇಸಕರಾದ ಡಾ. ವಿ. ಗಿರೀಶ್ ವಹಿಸುವರು.
ಸಮಾರಂಭದಲ್ಲಿ ಕರ್ನಾಟಕ ಸಂಸ್ಕೃತ ನಿರ್ದೇಶನಾಲಯದ ನಿಕಟಪೂರ್ವ ನಿರ್ದೇಶಕರಾದ ಡಾ. ಶ್ರೀನಿವಾಸ್ ಖೇಡಿ, ವಿದ್ವಾನ್ ಚಂದ್ರಶೇಖರಯ್ಯ, ವಿದ್ವಾನ್ ಶಿವರುದ್ರಯ್ಯ ಅವರನ್ನು ಸನ್ಮಾನಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.