ತುಮಕೂರು

ಅರಸು ಶಿಸ್ತುಬದ್ಧ ಹೋರಾಟಗಾರ: ಲಿಂಗಯ್ಯ

Published On :

ಶಿರಾ: ದೇಶದ ಸಾಮಾಜಿಕ ಚಳವಳಿಗಳ ಇತಿಹಾಸದಲ್ಲಿ ಕರ್ನಾಟಕಕ್ಕೆ ಮಹತ್ವದ ಸ್ಥಾನ ಇದೆ. ಕರ್ನಾಟಕ ಹಲವಾರು ಸಮಾಜ ಸುಧಾರಕರಿಗೆ ಜನ್ಮ ನೀಡಿದ ನೆಲ ಮಾತ್ರವಲ್ಲದೆ ದೇಶ- ವಿದೇಶಗಳ ಸರ್ಕಾರಗಳ ಸಾಮಾಜಿಕ ನ್ಯಾಯದ ನೀತಿ ನಿರೂಪಣೆಗೂ ಸ್ಪೂರ್ತಿ ಮತ್ತು ಮಾದರಿಯನ್ನು ಒದಗಿಸಿರುವ ರಾಜ್ಯವಾಗಿದೆ ಎಂದು ಮಾಜಿ ಶಾಸಕ ಸಾ. ಲಿಂಗಯ್ಯ ಹೇಳಿದರು.
ತಾಲೂಕಿನ ದಂಡಿಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಎಪ್ಪತ್ತರ ದಶಕದಲ್ಲಿ ಶಿಕ್ಷಣದ ಕಡೆ ಹೆಚ್ಚು ಒಲವು ತೋರಿಸಿದ ದೇವರಾಜು ಅರಸು ಪ್ರಬಲ ಜಾತಿಗಳ ಹಿಡಿತದಿಂದ ದೂರವಿಡಲು ಹಾಗೂ ದಲಿತ ಸಮುದಾಯಗಳ ಸಮೀಪ ಸಾಗುವಂತೆ ಮಾಡಿದರು ಎಂದು ಹೇಳಿದರು.
ಹಿಂದುಳಿದ ವರ್ಗಗಳ ನಾಯಕ ದೇವರಾಜ ಅರಸು ಆಡಳಿತ ಶಿಸ್ತುಬದ್ಧವಾಗಿತ್ತು. ಅರಸು ಹಿಂದುಳಿದ ವರ್ಗದ ಪ್ರಬಲ ಧ್ವನಿಯಾಗಿ ಕೆಲಸ ಮಾಡಿದರು. ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಶೋಷಿತ ವರ್ಗವನ್ನು ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅರಸು ಮಾದರಿಯಲ್ಲಿ ಈಗಿನ ಸರ್ಕಾರ ಉತ್ತಮ ಆಡಳಿತ ನೀಡಬೇಕಿದೆ ಎಂದರು.
ಸರ್ಕಾರದ ಜನಪರ ಯೋಜನೆಯ ಪ್ರತಿಫಲ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ದೊರೆಯಬೇಕೆಂಬುದು ಅರಸು ಕನಸಾಗಿತ್ತು. ಅದೇ ಮಾದರಿಯಲ್ಲೇ ರಾಜ್ಯ ಸರ್ಕಾರ ಜನಪರ ಯೋಜನೆಗಳ ಮೂಲಕ ಜನತೆಯ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಿ ಎಂದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಹುಣಸೇಹಳ್ಳಿ ಶ್ರೀನಿವಾಸ್, ಗ್ರಾಪಂ ಸದಸ್ಯೆ ಆರ್.ಮಂಜುಳ, ಎಸ್ಡಿಎಂಸಿ ಅಧ್ಯಕ್ಷ ಡಿ.ಎನ್. ಸಿದ್ದರಾಜು, ಉಪಾಧ್ಯಕ್ಷೆ ಲಕ್ಷ್ಮೀದೇವಿ, ಮುಖ್ಯ ಶಿಕ್ಷಕ ರುಕ್ಸಾನ ಬಾನು, ಪ್ರಭಾವತಿ ಮತ್ತು ಗ್ರಾಪಂ ಸದಸ್ಯರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.