ಕಾಂಗ್ರೆಸ್, ಬಿಜೆಪಿ ಭ್ರಷ್ಟಾಚಾರದಿಂದ ಬೇಸತ್ತ ಜನತೆ: ಶಿವಣ್ಣ ಆರೋಪ
ಕುಣಿಗಲ್: ಭ್ರಷ್ಟಾಚಾರದ ಕೂಪದಲ್ಲಿ ಮುಳುಗೇಳುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಭ್ರಷ್ಟಾಚಾರವನ್ನು ಕಂಡೂ ಕಾಣದಂತೆ ಸಹಿಸಿಕೊಂಡು ಜವಾಬ್ದಾರಿ ವಿರೋಧ ಪಕ್ಷದ ಸ್ಥಾನ ನಿರ್ವಹಣೆಯಲ್ಲಿ ವಿಫಲವಾಗಿರುವ ಬಿಜೆಪಿ ಪಕ್ಷಗಳಿಂದ ಜನತೆ ಬೇಸತ್ತಿದ್ದಾರೆ. ಈ ಪಕ್ಷಗಳಿಗೆ ಪರ್ಯಾಯವಾಗಿ ಇತರೆ ಪಕ್ಷಗಳತ್ತ ಮುಖಮಾಡುತ್ತಿದ್ದಾರೆ ಎಂದು ಆರ್ಪಿಐ ಅಭ್ಯರ್ಥಿ ಕುಣಿಗಲ್ ಶಿವಣ್ಣ ತಿಳಿಸಿದರು.
ಭಾನುವಾರ, ಕುಣಿಗಲ್ ಪಟ್ಟಣ ಸೇರಿದಂತೆ ತಾಲೂಕಿನ ವಿವಿದ ಹೋಬಳಿಗಳಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪಚುನಾವಣೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದ ಅವರು, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಲಕ್ಷಾಂತರ ಕೋಟಿ ರು.ಗಳ ಹಗರಣದಲ್ಲಿ ಮುಳುಗೇಳುತ್ತಿದೆ. ವಿರೋಧ ಪಕ್ಷವಾದ ಬಿಜೆಪಿ ಇದನ್ನು ಪ್ರಶ್ನಿಸಿ, ಕಾಂಗ್ರೆಸ್ ಸರ್ಕಾರದ ಮುಖಭಂಗ ಮಾಡಲು ಸಾಮರ್ಥ್ಯ ಇಲ್ಲದೆ ಕೋಮುವಾದಿ ಮೋದಿ ಜಪದಲ್ಲಿ ಮುಳುಗಿದ್ದಾರೆ.
ನಿಜಕ್ಕೂ ಎರಡೂ ಪಕ್ಷಗಳ ಕಾರ್ಯವೈಖರಿಯಿಂದ ಜನರು ಬೇಸತ್ತಿದ್ದಾರೆ. ಪರ್ಯಾಯ ಮಾರ್ಗಕ್ಕೆ ಬೇರೆ ಪಕ್ಷಗಳತ್ತ ಮುಖ ಮಾಡುತ್ತಿದ್ದಾರೆ. ಈ ಬಾರಿ ಆರ್ಪಿಐ ಬೆಂಬಲಿಸಿದ್ದಾರೆ. ಜೆಡಿಎಸ್ ಪಕ್ಷವೂ ಕೇವಲ ಅಪ್ಪಮಕ್ಕಳಿಗೆ ಮಾತ್ರ ಸೀಮಿತವಾಗಿ ಅವರ ಕುಟುಂಬಕ್ಕೆ ಅಧಿಕಾರ ದಕ್ಕಿಸಿಕೊಳ್ಳಲು ಸೀಮಿತವಾಗಿರುವ ಕಾರಣ ಆ ಪಕ್ಷದಿಂದಲೂ ಜನಪರ ಅಭಿವೃದ್ಧಿ ಕಾರ್ಯ ಅಸಾಧ್ಯ ಎಂದರು.
ಪ್ರಮುಖರಾದ ವೆಂಕಟಸ್ವಾಮಿ, ನರಸಿಂಹ ಪಟೇಲ್, ಧನರಾಜ್, ಕೃಷ್ಣಪ್ಪ, ರಾಮು ಇತರರು ಉಪಸ್ತಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

