ಶಿಕ್ಷಣ ಪ್ರಗತಿಯಿಂದ ಸಾಮಾಜಿಕ ಅಭಿವೃದ್ಧಿ: ಶಂಕರಾನಂದ
ಕ.ಪ್ರ.ವಾರ್ತೆ , ಗುಬ್ಬಿ , ಆ. 18
ಸಮಾಜದ ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದಿರಬೇಕಾದರೆ ಶೈಕ್ಷಣಿಕ ಅಭಿವೃದ್ಧಿಮುಖ್ಯ ಎಂದು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಾನಂದ ತಿಳಿಸಿದರು.
ಪಟ್ಟಣದ ಗುರುಭವನದಲ್ಲಿ ಎಚ್ಕೆಜಿಎನ್ ಚಾರಿಟಬಲ್ ಟ್ರಸ್ಟ್, ಗ್ಲೋಬಲ್ ಎಜುಕೇಷನ್ ಮತ್ತು ತುಮಕೂರಿನ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ವೇತನಾ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಂ ಸಮುದಾಯದ ಮಕ್ಕಳಿಗೆ ಮಾತ್ರ ಪ್ರತಿಭಾ ಪುರಸ್ಕಾರ ನೀಡದೆ ಎಲ್ಲಾ ವರ್ಗದ ಮಕ್ಕಳಿಗೂ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಅಭಿನಂದನಾರ್ಹ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಅವರನ್ನು ಸಮಾಜದ ಸತ್ಪ್ರಜೆಗಳನ್ನಾಗಿ ರೂಪಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಲು ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತ ಟ್ರಸ್ಟ್ ಕಾರ್ಯ ಮಹತ್ವದಾಗಿದೆ ಎಂದು ತಿಳಿಸಿದರು.
ಗುಬ್ಬಿಯ ಎಚ್ಕೆಜಿಎನ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಲೀಂ ಪಾಷಾ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣದ ಅಭಿವೃದ್ಧಿಗೆ ನಮ್ಮ ಟ್ರಸ್ಟ್ ವತಿಯಿಂದ ಆರ್ಥಕ ನೆರವು ಹಾಗೂ ಸಹಕಾರ ನೀಡಲು ಚಿಂತನೆ ನಡೆಸಲಾಗುತ್ತಿದೆ. ಕೇವಲ ಮುಸ್ಲಿಂ ಸಮುದಾಯದ ಮಕ್ಕಳಿಗೆ ಅಲ್ಲದೆ ಸಮಾಜದ ಎಲ್ಲಾ ವರ್ಗದ ಮಕ್ಕಳಗೆ ಶಿಕ್ಷಣಕ್ಕೆ ನೆರವು ನೀಡುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಗ್ಲೋಬಲ್ ಎಜುಕೇಷನ್ ಮತ್ತು ತುಮಕೂರಿನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅಬ್ಜಲ್ ಷರೀಫ್, ಪ.ಪಂ. ಸದಸ್ಯ ಜಿ.ಮಹಮ್ಮದ್ ಸಾದಿಕ್, ಮಾಜಿ ಪುರಭಾ ಸದಸ್ಯ ಅಲ್ಹಜ್ ಮಹಮ್ಮದ್ ಮುಸ್ತಾಫ, ಗುಬ್ಬಿ ಕಾಯಿಪೇಟೆಯ ಮಸ್ಜಿದ್ ಕಾರ್ಯದರ್ಶಿ ಜಿ.ಎಲ್. ಶೌಕತ್ ಆಲಿ, ಎಸ್.ಎಸ್. ಟ್ರಾನ್ಸ್ಫೋರ್ಟ್ ಜಿ.ಎಸ್. ಗೌಸ್ ಮೊಹಿನುದ್ದೀನ್, ಗುಬ್ಬಿಯ ಎಚ್.ಕೆ.ಜಿ.ಎನ್. ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಅಲ್ಹಜ್ ಸೈಯದ್ ನಾಸೀರುದ್ದೀನ್, ಅಧ್ಯಕ್ಷ ಸಲೀಂ ಪಾಷಾ, ಕಾರ್ಯದರ್ಶಿ ನಜೀರ್ ಪಾಷಾ ಹಾಗೂ ಗುಬ್ಬಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಗುಬ್ಬಿ, ಗುಬ್ಬಿಯ ಲಯನ್ಸ್ ಅಧ್ಯಕ್ಷ ಜಿ.ಆರ್. ಶಿವಕುಮಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

