'ಸದೃಢ, ಸಮೃದ್ಧ, ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣ'
ತುಮಕೂರು: ಭಾರತದ ಸ್ವಾತಂತ್ರ್ಯ ಲಕ್ಷಾಂತರ ಭಾರತೀಯರ ತ್ಯಾಗ ಬಲಿದಾನದಿಂದ ಬಂದಿದ್ದು ಸ್ವಾತಂತ್ರ್ಯೋತ್ಸವದ ಸವಿಯನ್ನು ಪಡೆದರೂ ಇಂದು ದೇಶದ ಆರ್ಥಿಕ ಹಿನ್ನಡೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಭದ್ರತೆಗೆ ಅಪಾಯ ಬಂದಿದೆ ಎಂದು ತುಮಕೂರು ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಪಿ. ಮಹೇಶ್ ಕರೆ ನೀಡಿದರು.
ಅವರು ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದಲ್ಲಿ ಆರ್ಥಿಕ ಅಭದ್ರತೆ, ಬೆಲೆ ಏರಿಕೆ, ವಿವಿಧ ರಂಗಗಳಲ್ಲಿ ಬೆಳವಣಿಗೆ ಕುಂಠಿತವಾಗಿದ್ದು ಭಯೋತ್ಪಾದನೆ, ನಕ್ಸಲೀಕರಣದಿಂದ ಭಯದ ವಾತಾವರಣ ನಿರ್ಮಾಣವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಬಿ. ನಂದೀಶ್ ಅವರು ಇಂದು ಸಮಾಜದಲ್ಲಿ ಸ್ವಾತಂತ್ರ್ಯೋತ್ಸವದ ನೆನಪು ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಹುತಾತ್ಮರಾದ ಭಾರತೀಯ ಲಕ್ಷಾಂತರ ಜನರ ಬಲಿದಾನವಾಗಿದೆ. ನೂರಾರು ವರ್ಷಗಳ ದಾಸ್ಯದಿಂದ ಸ್ವಾತಂತ್ರ್ಯ ಬಂದಿದ್ದು ಅದರ ಮಹತ್ವ, ವಿಚಾರಧಾರೆಗಳು ನಮ್ಮ ಸಮಾಜದ ವ್ಯವಸ್ಥೆಯಿಂದ ಮೂಡಿ ಬರಲಿ ಎಂದರು.
ಜಿಲ್ಲಾ ಕಾರ್ಯದರ್ಶಿ ನಂದೀಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಸುಜಾತ ಚಂದ್ರಶೇಖರ್, ನಾಗಭೂಷಣ್, ಬಿ.ಎಸ್. ನಾಗೇಶ್, ಪಿ.ರವಿಕುಮಾರ್, ಪ್ರಭು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

