'ಹಿಂದುಳಿದ ವರ್ಗಕ್ಕೆ ಅರಸು ಕೆಲಸ ವರದಾನ'
ಕುಣಿಗಲ್: ಅಲ್ಪಸಂಖ್ಯಾತರ, ಹಿಂದುಳಿದ ವರ್ಗದವರ, ದಲಿತರ ಸಮಗ್ರ ಏಳಿಗೆಗೆ ಶ್ರಮಿಸಿದ ಮಾಜಿ ಸಿಎಂ ದಿ.ಡಿ.ದೇವರಾಜ್ ಅರಸ್ ಅವರು ಕೈಗೊಂಡ ಅಭಿವೃದ್ಧಿ ಪರ ರಾಜಕಾರಣ, ಎಲ್ಲಾ ಹಂತದ ಜನಪ್ರತಿನಿಧಿಗಳಿಗೆ ಮಾರ್ಗದರ್ಶಿಯಾಗಿದೆ ಎಂದು ಹಿಂದುಳಿದ ವರ್ಗಗಳ ಯುವ ವೇದಿಕೆ ಅಧ್ಯಕ್ಷ ನರಸಿಂಹ ಅಭಿಪ್ರಾಯಪಟ್ಟರು.
ಮಂಗಳವಾರ ಮಾಜಿ ಸಿಎಂ ದಿ.ಡಿ.ದೇವರಾಜ ಅರಸು 98ನೇ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಾಲು, ಬ್ರೆಡ್, ಹಣ್ಣು ವಿತರಿಸಿದ ನಂತರ ಅವರು ಮಾತನಾಡಿದರು.
ದೇಶದ ಒಟ್ಟಾರೆ ಜನಸಂಖ್ಯೆಯ ಬಹುಪಾಲು ಸಂಖ್ಯೆಯಲ್ಲಿರುವ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ಸಮುದಾಯವನ್ನು ತಮ್ಮ ಮಾತಿನ ಮೋಡಿಯಿಂದ ಚುನಾವಣೆ ಸಮಯದಲ್ಲಿ ಮಾತ್ರ ಮತಬ್ಯಾಂಕ್ನ್ನಾಗಿ ಬಳಸಿಕೊಳ್ಳುವಂತ ಪ್ರವೃತ್ತಿ ತೋರದೆ,
ಹಲವು ಜನಪರ ಕಾರ್ಯಕ್ರಮಗಳನ್ನು ಘೋಷಿಸಿ, ಪ್ರಾಮಾ ಣಿಕವಾಗಿ ಅನುಷ್ಠಾನಗೊಳಿಸುವ ಮೂಲಕ ದೇವರಾಜ ಅರಸು ದಿಟ್ಟ ಕ್ರಮ ಕೈಗೊಂಡರು ಎಂದು ಶ್ಲಾಘಿಸಿದರು.
ಸಾರ್ವಜನಿಕ ಆಸ್ಪತ್ರೆಯ ಹಲವು ರೋಗಿಗಳಿಗೆ ಹಾಲಿ, ಬ್ರೆಡ್ ಹಾಗೂ ಹಣ್ಣನ್ನು ವಿತರಿಸಿದ್ದು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ಬಾಬು, ಮುಖಂಡರಾದ ರಂಗನಾಥ್,ರಘು, ರಾಜೇಶ,ಗೋಪಿ,ಶ್ರೀನಿವಾಸ್, ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

