'ವಾಣಿಜ್ಯ ಬೆಳೆಗೆ ವೈಜ್ಞಾನಿಕ ಬೆಲೆ ನೀಡಿ'
ಹೆಬ್ಬೂರು: ಎಲ್ಲಾ ಸರ್ಕಾರಗಳು ರೈತರನ್ನು ಸಾಲಗಾರರನ್ನಾಗಿ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಸೋಮಗುದ್ದ ರಂಗಸ್ವಾಮಣ್ಣ ಆರೋಪಿಸಿದ್ದಾರೆ.
ಅವರು ಇಲ್ಲಿಗೆ ಸಮೀಪದ ಬಿಸಲಹಳ್ಳಿ, ಚಿಕ್ಕಗೊಲ್ಲಹಳ್ಳಿ, ಬೈಚೇನಹಳ್ಳಿ, ಸೀಗೆಪಾಳ್ಯದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೂತನ ಗ್ರಾಮ ಘಟಕಗಳ ಹಾಗೂ ರೈತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ರೈತರ ಬೆಳೆಗಳಿಗೆ ಸರಿಯಾದ ಬೆಲೆ ನಿಗದಿಪಡಿಸದೆ ರೈತರನ್ನು ಶೋಷಣೆಗೊಳಪಡಿಸಿ ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಎಲ್ಲಾ ಸರ್ಕಾರಗಳು ಮಾಡುತ್ತಾ ಬಂದಿವೆ. ರೈತರು ಸಂಘಟಿತರಾಗುವ ಮೂಲಕ ಸರ್ಕಾರದ ಈ ನೀತಿಯ ವಿರುದ್ಧ ತಮ್ಮ ಹಕ್ಕನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ಎ. ಗೋವಿಂದರಾಜು ಅವರು ರೈತರ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಕೆ ಮತ್ತು ತೆಂಗು ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ಸರ್ಕಾರ ಕೂಡಲೇ ನಿಗದಿಪಡಿಸಿ ರೈತರ ಇನ್ನಿತರ ಬೆಳೆಗಳ ಖರೀದಿಗೆ ಕೂಡಲೇ ಆವರ್ತನಿಧಿ ಸ್ಥಾಪಿಸುವಂತೆ ಆಗ್ರಹಿಸಿದರು.
ನಿಜಾನಂದಮೂರ್ತಿ, ವೆಂಕಟಗೌಡ್ರು, ಸಿ.ಟಿ. ಕುಮಾರ್, ಚಿಕ್ಕಬೋರೇಗೌಡ, ಮುನಿರಾಜು, ಯತೀಶ್, ಮೂಡ್ಲಗಿರಿಯಪ್ಪ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

