ದೇಶದಲ್ಲೇ ಪ್ರಥಮ ಬಾರಿಗೆ ಮಾನಸಿಕ ಆರೋಗ್ಯ ಕಾರ್ಯಪಡೆ: ಅಶೋಕ್ ಪೈ
ಕ.ಪ್ರ.ವಾರ್ತೆ ತುಮಕೂರು ಆ.24
ಕರ್ನಾಟಕವನ್ನು ಮಾದರಿ ಮಾನಸಿಕ ಸ್ವಾಸ್ಥ್ಯ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಭಾರತದಲ್ಲಿಯೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಕಾರ್ಯಪಡೆ ರಚಿಸಲಾಗಿದೆ ಎಂದು ಕಾರ್ಯಪಡೆಯ ಅಧ್ಯಕ್ಷ ಡಾ.ಅಶೋಕ್ ಪೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ರೀತಿಯ ಮಾನಸಿಕ ಕಾಯಿಲೆಗಳಿಗೆ ತುತ್ತಾದ ಲಕ್ಷಾಂತರ ಜನರಿದ್ದು, ಇವರಿಗೆ ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ಮೂಲಕ ಅವರನ್ನು ಮಾನಸಿಕ ಕಾಯಿಲೆಯಿಂದ ಮುಕ್ತರನ್ನಾಗಿಸುವ ಜೊತೆಗೆ, ಮಾನಸಿಕ ಕಾಯಿಲೆಗಳಿಗೆ ಚಿಕಿತ್ಸೆಯನ್ನು ಗುರುತಿಸಿ ಸೂಕ್ತ ಸಲಹೆ ನೀಡುವಂತಹ ಸಂಪನ್ಮೂಲ ವ್ಯಕ್ತಿಗಳನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯಾರಂಭ ಮಾಡಲಿದೆ ಎಂದರು.
ಪೂರ್ಣ ಪ್ರಮಾಣದ ವರದಿ: ಕಳೆದ 10 ತಿಂಗಳಿನಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಾನಸಿಕ ಆರೋಗ್ಯ ಕಾರ್ಯಪಡೆ,ಎಲ್ಲಾ ಜಿಲ್ಲೆಗಳಿಂದ ಮಾಹಿತಿಗಳನ್ನು ಕಲೆ ಹಾಕಿ ಈಗಾಗಲೇ ಸರಕಾರಕ್ಕೆ ಮಧ್ಯಂತರ ವರದಿ ನೀಡಿದ್ದು ಮುಂದಿನ ತಿಂಗಳ ಮೊದಲ ವಾರದಲ್ಲಿ ಪೂರ್ಣ ಪ್ರಮಾಣದ ವರದಿ ನೀಡಲಿದೆ. ರಾಜ್ಯದಲ್ಲಿರುವ ಮಾನಸಿಕ ರೋಗಿಗಳಿಗೆ ಅಯಾಯ ಜಿಲ್ಲೆಯಲ್ಲಿಯೇ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಮಂಡಳಿ (ಡಿಎಂಎ) ತೆರೆಯುವ ಮೂಲಕ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸೂಕ್ತರೀತಿಯಲ್ಲಿ ಖರ್ಚು ಮಾಡಿ ಎಲ್ಲರಿಗೂ ಸಮರ್ಪಕವಾಗಿ ಚಿಕಿತ್ಸೆ ದೊರೆಯುವಂತೆ ಮಾಡುವುದು ಡಿಎಂಎಯ ಕರ್ತವ್ಯವಾಗಿರುತ್ತದೆ ಎಂದರು.
ಡಾ.ರಜಿನಿ ಪೈ, ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ, ಡಿಹೆಚ್ಒ ಡಾ.ಚನ್ನಮಲ್ಲಯ್ಯ ಉಪಸ್ಥಿತರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

