ಪತ್ರಕರ್ತೆ ಮೇಲಿನ ಅತ್ಯಾಚಾರಕ್ಕೆ ಖಂಡನೆ
ತಿಪಟೂರು: ಮುಂಬೈ ಪತ್ರಕರ್ತೆಯ ಮೇಲೆ ದುಷ್ಕರ್ಮಿ ಯುವಕರ ಗುಂಪು ಅತ್ಯಾಚಾರವೆಸಗಿರುವುದು ಖಂಡನೀಯವಾಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ ತಾಲೂಕು ಸಮಿತಿ ಒತ್ತಾಯಿಸಿದೆ.
ಈ ಸಂಬಂಧ ಎಸ್ಎಫ್ಐ ಮುಖಂಡರು ಮಾತನಾಡಿ, ಇಂದು ಸಮಾಜದಲ್ಲಿ ಮಹಿಳೆಯರು ಅತ್ಯಾಚಾರ, ವರದಕ್ಷಿಣೆ ಕಿರುಕುಳ, ದೌರ್ಜನ್ಯಗಳಂತ ಪ್ರಕರಣಗಳು ಇತ್ತೀಚೆಗಂತೂ ದಿನನಿತ್ಯ ಸಂಭವಿಸುತ್ತಿದ್ದು, ಮಹಿಳೆಯರಿಗೆ ಸ್ವಾತಂತ್ರ್ಯ ಇಲ್ಲದಂತಾಗಿ ಒಂಟಿಯಾಗಿ ಓಡಾಡದಂತಾಗಿದೆ. ಹೆಣ್ಣು ಮಕ್ಕಳನ್ನು ಮಾರಾಟದ ಸರಕನ್ನಾಗಿ ಉಪಯೋಗಿಸುತ್ತಿರುವುದು ತೀವ್ರ ಕಳವಳದ ಸಂಗತಿಯಾಗಿದೆ. ಮುಂಬೈ ಪತ್ರಕರ್ತೆ ಮೇಲೆ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದು,ಅತ್ಯಾಚಾರ ವೆಸಗಿರುವ ಆರೋಪಿಗಳನ್ನು ಕೂಡಲೆ ಬಂಧಿಸಬೇಕು. ಜೊತೆಗೆ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಎ.ಎಲ್.ದಿವ್ಯಾ,ಕಾರ್ಯದರ್ಶಿ ಕೆ.ಎಸ್.ಮೇಘಶ್ರೀ,ಸಹ ಕಾರ್ಯದರ್ಶಿ ಎಸ್.ಲಾವಣ್ಯ,ತಾಲ್ಲೂಕು ಮುಖಂಡರುಗಳಾದ ಅಂಕುಶ, ಭಾರತಿ ಮತ್ತಿತರರು ಉಪಸ್ಥಿತರಿದ್ದರು.
ಎನ್ಸಿಸಿ ಘಟಕಕ್ಕೆ ಚಾಲನೆ
ತಿಪಟೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕ ಮತ್ತು ಕರ್ನಾಟಕ ಬ್ಯಾಟಾಲಿಯನ್ 4ನೇ ಘಟಕದ ಸಂಯುಕ್ತಾಶ್ರಯದಲ್ಲಿ ಎನ್ಸಿಸಿ ಆಯ್ಕೆ ಪ್ರಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಿಲಿಟರಿ ಅಧಿಕಾರಿ ಅರ್ಜುನ್ ಸುಬೇದಾರ್, ಹಿರೇಗೌಡ, ಪ್ರಾಂಶುಪಾಲ ಡಾ.ಜಯದೇವಪ್ಪ, ಗುರುಕುಲ ಮಠದ ಸಿಇಒ ಹರಿಪ್ರಸಾದ್,ಎನ್ಸಿಸಿ ಅಧಿಕಾರಿ ಪ್ರೊ.ರಾಜಶೇಖರ್ ಹಾಗೂ ಸಿಬ್ಬಂದಿವರ್ಗ ಸೇರಿದಂತೆ ಕಾಲೇಜಿನ 250 ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

