ವರದಕ್ಷಿಣೆ ಪಿಡುಗಿನ ಬಗ್ಗೆ ವ್ಯಾಪಕ ಪ್ರಚಾರ ಅಗತ್ಯ
ಕ.ಪ್ರ. ವಾರ್ತೆತುಮಕೂರುಆ.28
ಗ್ರಾಮಪಂಚಾಯತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ನಡೆಯುವ ವಿವಿಧ ಸಭೆಗಳಲ್ಲಿ ವರದಕ್ಷಿಣೆ ಪಿಡುಗಿನ ಬಗ್ಗೆ ವ್ಯಾಪಕ ಚರ್ಚೆ ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವರದಕ್ಷಿಣೆ ತಡೆ ಕಾಯ್ದೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ವರದಕ್ಷಿಣೆ ಕೊಡುವುದು ಮತ್ತು ತೆಗೆದುಕೊಳ್ಳುವುದು ಅತ್ಯಂತ ಕೆಟ್ಟ ಸಂಪ್ರದಾಯವಾಗಿದ್ದು, ಕುಟುಂಬಗಳಲ್ಲಿ ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ವಿವಾಹಿತ ಮಹಿಳೆಗೆ ಕಿರುಕುಳ ನೀಡುವುದು ಅಮಾನುಷ ಕೃತ್ಯ ಎಂದರು.
ಜನವರಿ-2013ರಿಂದ ಜೂನ್ 2013ರವರೆಗೆ 46 ವರದಕ್ಷಿಣೆ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಬಗ್ಗೆ ವಿವರವಾಗಿ ಚರ್ಚಿಸಿದ ಜಿಲ್ಲಾಧಿಕಾರಿಗಳು ಮುಂದಿನ ಸಭೆಗಳಿಗೆ ಬರುವಾಗ ಒಟ್ಟು ದಾಖಲಾದ ಪ್ರಕರಣಗಳು, ಇತ್ಯರ್ಥಗೊಂಡ ಪ್ರಕರಣಗಳು, ಬಾಕಿ ಪ್ರಕರಣಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಸಲ್ಲಿಸುವಂತೆ ಸೂಚಿಸಿದರು.
ಕಿರುಕುಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಜಾತ ಅವರು ಮಾತನಾಡಿ, ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಮತ್ತು ಗಂಡ ಎಲ್ಲಾ ಸೇರಿ ವಿವಾಹವಾದ ಮಹಿಳೆಗೆ ಕಿರುಕುಳ ನೀಡಲು ಆರಂಭಿಸುತ್ತಾರೆ.
ಈ ರೀತಿ ವಿವಾಹಿತ ಮಹಿಳೆಯನ್ನು ಶೋಷಣೆ ಮಾಡುವುದರಿಂದ ಆ ಹೆಣ್ಣು, ಯಾವುದೇ ದಾರಿ ತೋಚದೆ ಆತ್ಮಹತ್ಯೆಯಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ. ಒಂದು ಹೆಣ್ಣು ತಾನು ಹೆಣ್ಣೆಂಬುದನ್ನು ಮರೆತು ಮತ್ತೊಂದು ಹೆಣ್ಣಿಗೆ ಕಿರುಕುಳ ನೀಡುವುದು ಹೇಯ ಕೃತ್ಯ ಎಂದು ತಿಳಿಸಿದರು.
ಸಭೆಯಲ್ಲಿ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

