ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಶಾಸಕ
ಪಾವಗಡ: ಸಂಘದಲ್ಲಿ ಸದಸ್ಯತ್ವ ನೋಂದಣಿ ಪಡೆದು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಿ ಎಂದು ಶಾಸಕ ಕೆ.ಎಂ. ತಿಮ್ಮರಾಯಪ್ಪ ಕಟ್ಟಡ ಕಾರ್ಮಿಕರಿಗೆ ಕರೆ ನೀಡಿದರು.
ಕಟ್ಟಡ ಕಾರ್ಮಿಕರ ದಿನಾಚರಣೆ ಅಂಗವಾಗಿ ತಾ.ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಟ್ಟಡ ಕಾರ್ಮಿಕರು ಒಗ್ಗಟಾಗಿ ಕೆಲಸ ಮಾಡಬೇಕು. ದುಶ್ಟಟಗಳಿಂದ ದೂರವಿರಬೇಕು. ನಿಮಗೆ ಕೊಡುವ ಕೂಲಿಗಿಂತ ನೀವು ಮಾಡಿದ ಕೆಲಸ ಶಾಶ್ವತವೆಂದ ಅವರು ಕಷ್ಟಪಟ್ಟು ದುಡಿದು ಗಳಿಸಿದ ಹಣದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಹಣ ವಿನಿಯೋಗಿಸಿ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ರ್ಮಿಕರ ಸಂಘದಲ್ಲಿ ಕಟ್ಟಡ ಕಾರ್ಮಿಕರು ನೋಂದಣಿ ಸದಸ್ಯತ್ವ ಪಡೆದರೆ ಸರ್ಕಾರದ ಸೌಲಭ್ಯ ಪಡೆಯಲು ಅರ್ಹರಾಗುತ್ತೀರಿ ಎಂದ ಅವರು ಈ ಕೂಡಲೇ ಕಟ್ಟಡ ನಿರ್ಮಾಣದ
ಸಂಘದಲ್ಲಿ ಸದಸ್ಯತ್ವ ನೋಂದಣಿ ಪಡೆಯಲು ಕರೆ ನೀಡಿದರು. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಆನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ಹೆಣ್ಣು ಮಕ್ಕಳ ಮದುವೆಗೆ 1ಲಕ್ಷ ಸಹಾಯಧನ ದೊರೆಯಲಿದೆ ಎಂದರು. ಚುನಾವಣೆಯಲ್ಲಿ ಕಟ್ಟಡ ಕಾರ್ಮಿಕರು ನನ್ನ ಬಗ್ಗೆ ವಿಶ್ವಾಸವಿಟ್ಟು ಮತ ನೀಡಿ ಗೆಲ್ಲಸಿದ್ದಿರಿ, ನಿಮ್ಮ ಸೇವೆಗೆ ಬದ್ಧನಾಗಿ ಕೆಲಸ ಮಾಡುವ ಭರವಸೆ ನೀಡಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಎನ್.ತಿಮ್ಮಾರೆಡ್ಡಿ ಮಾತನಾಡಿ ಕಟ್ಟಣದ ಕಾರ್ಮಿಕ ಸಂಘದ 20 ಮಂದಿ ನೂತನ ಸದಸ್ಯರಿಗೆ ಸಂಘದ ಸದಸ್ಯತ್ವ, ಗುರುತಿನ ಚೀಟಿಗಳನ್ನು ವಿತರಿಸಿದರು.
ಕಾರ್ಮಿಕರ ಸಮಸ್ಯೆ ಹಾಗೂ ಅಭಿವೃದ್ಧಿ ಕುರಿತು ತಾ.ಕಾಂಗ್ರೆಸ್ ಅಧ್ಯಕ್ಷ ಸುದೇಶ್‌ಬಾಬು, ಮುಖಂಡರಾದ ಎಸ್.ಕೆ.ರೆಡ್ಡಿ, ರೈತ ಸಂಘದ ಅಧ್ಯಕ್ಷ ವಿ. ನಾಗಭೂಷಣ್ ರೆಡ್ಡಿ, ಶಂಕರರೆಡ್ಡಿ, ಸಂಘ ಸಂಸ್ಥೆಗಳ ಪ್ರತಿನಿಧಿ ಆರ್.ಟಿ.ಖಾನ್ ಮುಂತಾದವರು ಮಾತನಾಡಿದರು. ಸಂಘದ ಅಧ್ಯಕ್ಷ ಮೆಹಬೂಬ್ ಖಾನ್ ಸೇರಿದಂತೆ, ಪುರಸಭೆ ಸದಸ್ಯರಾದ ದಾದಲೂರಪ್ಪ ಕೆ.ಎಸ್.ಪ್ರಕಾಶ್, ಸುದಾಕರ್‌ರೆಡ್ಡಿ, ಗೋಪಾಲ್, ಮನುಪ್ರಸಾದ್, ಮಲ್ಲಯ್ಯ, ಮುಂತಾದವರನ್ನು ಸನ್ಮಾನಿಸಿದರು. ಜಗದೀಶ್, ರೆಹಮಾನ್, ದಾವಾನಾಯ್ಕ್, ಪಿ.ಎ.ರಮೇಶ್, ಆನಂದ್ ಸೇರಿದಂತೆ ಸಂಘದ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

