ಕೆನರಾ ಬ್ಯಾಂಕ್ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ: ಕುರ್ತುಕೋಟಿ
ಶಿರಾ: ವಿದ್ಯಾಸಾಲ, ಕೃಷಿ ಸಾಲ, ಗೃಹ ಸಾಲ, ಕೈಗಾರಿಕಾ ಸಾಲ ಇನ್ನೂ ಹಲವು ಸೌಲಭ್ಯಗಳನ್ನು ಜನತೆಗೆ ನೀಡುವ ಮೂಲಕ ಕೆನರಾ ಬ್ಯಾಂಕ್ ದೇಶದ ಎಲ್ಲಾ ವರ್ಗದ ಜನರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಕೆನರಾ ಬ್ಯಾಂಕ್ ರಾಜ್ಯ ಉಪ ಮಹಾ ಪ್ರಬಂಧಕ ಕುರ್ತುಕೋಟಿ ಅವರು ತಿಳಿಸಿದರು.
ಅವರು ನಗರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕೆನರಾ ಬ್ಯಾಂಕ್ ಆರ್ಥಿಕ ಸಾಕ್ಷರತಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗ್ರಾಮಾಂತರ ಪ್ರದೇಶಗಳಿಗೆ ಬ್ಯಾಂಕ್ನ ಸಾಲ ಸೌಲಭ್ಯಗಳ ಬಗ್ಗೆ ವಿವರಿಸಿದ ಅವರು ಬ್ಯಾಂಕುಗಳಲ್ಲಿ ಸಾಲವನ್ನು ಪಡೆಯುವುದು ಗ್ರಾಹಕನ ಆದ್ಯ ಕರ್ತವ್ಯ ಮತ್ತು ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ ಬ್ಯಾಂಕಿನ ಏಳಿಗೆಗೆ ಸಹಕರಿಸಬೇಕು ಎಂದರು. ಮುಖ್ಯ ಅತಿಥಿಗಳಾಗಿ ತುಮಕೂರು ಕೆನರಾ ಬ್ಯಾಂಕ್ ಚೀಫ್ ಮ್ಯಾನೆಜರ್ ಎನ್.ಜಯರಾಮಯ್ಯ ಮಾತನಾಡಿ ಆರ್ಥಿಕ ಸೇರ್ಪಡೆ ಯೋಜನೆಯಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ಪ್ರಾರಂಭಿಸುತ್ತೇವೆ ಎಂದರು. ಶಿರಾ ಕೆನರಾ ಬ್ಯಾಂಕ್ ಶಾಖೆ ಮ್ಯಾನೇಜರ್ ಭಾರತೀ ಪಾಟೀಲ್, ಆರ್ಥಿಕ ಸಲಹೆಗಾರ ಕೆ.ವಿ. ಉದಯಬಾನು, ಉಪ ಮಹಾ ಪ್ರಬಂಧಕ ಡಾ.ಎಂ.ರೆಡ್ಡಯ್ಯ, ಕಾರ್ಯಕ್ರಮದಲ್ಲಿ ಬ್ಯಾಂಕಿನ ಸೇವೆಗಳ ಬಗ್ಗೆ ಮಾತನಾಡಿದರು.
ಪ್ರಾರಂಭದಲ್ಲಿ ಕುಮಾರಿ ಕಾವ್ಯ ಪ್ರಾರ್ಥಿಸಿ, ಕೆ.ವಿ.ಉದಯ ಬಾನು ಸ್ವಾಗತಿಸಿ, ದೇವರಾಜು ನಿರೂಪಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

