ತುಮಕೂರು

ಜ್ಞಾನ ವೃದ್ಧಿಯಾಗಬೇಕು, ಸಂಶೋಧನಾ ಕ್ಷೇತ್ರ ವಿಸ್ತರಿಸಬೇಕು

Published On :

ಕ.ಪ್ರ.ವಾರ್ತೆ ತುಮಕೂರು ಆ. 29
ಜ್ಞಾನ ವೃದ್ಧಿಯಾಗಬೇಕು. ಸಂಶೋಧನಾ ಕ್ಷೇತ್ರ ವಿಸ್ತರಿಸಬೇಕು ಎಂದು ಬೆಂಗಳೂರು ವಿವಿ ನಿವೃತ್ತ ಕುಲಪತಿ ಡಾ.ಎನ್.ಆರ್. ಶೆಟ್ಟಿ ಪ್ರತಿಪಾದಿಸಿದರು.
ಅವರು ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಡ್ವಾನ್ಸಸ್ ಇನ್ ಸಿಗ್ನಲ್ ಪ್ರೊಸೆಸಿಂಗ್, ಕಮ್ಯುನಿಕೇಷನ್ ಅಂಡ್ ನೆಟ್‌ವರ್ಕಿಂಗ್ ಕುರಿತ ರಾಷ್ಟ್ರೀಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಶಾಲಾ ಕಾಲೇಜುಗಳಲ್ಲಿ ಒಳ್ಳೆಯ ಶಿಕ್ಷಣ ದೊರಕಿ ಉನ್ನತ ಶಿಕ್ಷಣ ಉತ್ಕೃಷ್ಟವಾಗಬೇಕು. ಶಿಕ್ಷಣಕ್ಕೆ ಭದ್ರ ಬುನಾದಿ ದೊರಕುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಕಠಿಣ ಪರಿಶ್ರಮದಿಂದ ಮಾತ್ರ ಒಳ್ಳೆಯ ಫಲಿತಾಂಶ ಸಿಗಲು ಸಾಧ್ಯ ಎಂದರು.
ಉತ್ತಮ ಮಟ್ಟಕ್ಕೆ ಕೊಂಡೊಯ್ಯಬಹುದು: ಸಿದ್ಧಾರ್ಥ ಸಂಸ್ಥೆಯ ಸಂಸ್ಥಾಪಕರಾದ ಡಾ. ಎಚ್.ಎಂ ಗಂಗಾಧರಯ್ಯನವರನ್ನು ಸ್ಮರಿಸುತ್ತ, ಹೊಸತನದ ಸಂಶೋಧನೆಗಳಿಗೆ ಹೆಚ್ಚು ಒತ್ತು ನೀಡಿ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವ್ಯಾವಹಾರಿಕ ಮಾದರಿಯಲ್ಲಿ ಹೊಸತನಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡಾಗ ಯಶಸ್ಸು ಸಾಧ್ಯ. ಹೀಗಿದ್ದಾಗ ಮಾತ್ರ ನಮ್ಮ ದೇಶದಲ್ಲಿ ಶಿಕ್ಷಣವನ್ನು ಉತ್ತಮ ಮಟ್ಟಕ್ಕೆ ಕೊಂಡೊಯ್ಯಬಹುದು ಎಂದರು.
ಸಿದ್ದಾರ್ಥ ಸಂಸ್ಥೆಯ ಆಡಳಿತಾಧಿಕಾರಿ ಪ್ರೊ. ಸಿ.ಎನ್. ನರಸಿಂಹಮೂರ್ತಿ ಮಾತನಾಡಿ, ಇಂತಹ ಕಾರ್ಯಾಗಾರಗಳು ಕೇವಲ ಕಾರ್ಯಾಗಳಾಗೇ ಉಳಿಯದೆ ಅವುಗಳಿಂದ ನಮ್ಮ ಜ್ಞಾನ ವೃದ್ಧಿಯಾಗಬೇಕು. ಸಂಶೋಧನಾ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ವಾತಾವರಣವಿದ್ದಲ್ಲಿ ಏನನ್ನಾದರೂ ಸಾಧಿಸಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎ. ಕೃಷ್ಣಮೂರ್ತಿ ಮಾತನಾಡಿ, ಸಂವಹನ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದವರನ್ನು ನೆನಪಿಸಿದರು. ಇಂದಿನ ನಿತ್ಯ ಜೀವನದಲ್ಲಿ ತಾಂತ್ರಿಕತೆ ಹಾಸುಹೊಕ್ಕಾಗಿದೆ ಹಾಗೂ ನಮ್ಮ ಜೀವನವನ್ನು ಸುಲಭವಾಗಿಸಿದೆ. ವಿದ್ಯಾರ್ಥಿಗಳು ಪ್ರಾಮಾಣಿಕರಾಗಿರಬೇಕು ಮತ್ತು ತಮ್ಮ ಒಳಗಿನ ಪ್ರತಿಭೆಯನ್ನು ಅರಿತು ಅದನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.  
ಸಮಾರಂಭದಲ್ಲಿ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥರಾದ ಡಾ. ಎಂ. ಝಡ್ ಕುರಿಯನ್, ಕಾರ್ಯಕ್ರಮದ ಸಂಯೋಜಕರಾದ ಭರತ್ ಕುಮಾರ್, ಡಾ. ಅಶೋಕ್ ಮೆಹ್ತಾ, ಉಪ ಪ್ರಾಂಶುಪಾಲರಾದ ಡಾ. ವೀರಯ್ಯ ಮತ್ತು ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಅಡ್ವಾನ್ಸಸ್ ಇನ್ ಸಿಗ್ನಲ್ ಪ್ರೊಸೆಸಿಂಗ್, ಕಮ್ಯೂನಿಕೇಷನ್‌ಅ ಅಂಡ್ ನೆಟ್‌ವರ್ಕಿಗ್ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಗಳನ್ನು ಮಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.