ಪಾರ್ಕ್ನಲ್ಲಿ ಕಸ ಸಂಗ್ರಹಣೆಜಿಲ್ಲಾಧಿಕಾರಿಗೆ ಕರವೇ ದೂರು
ಕ.ಪ್ರ.ವಾರ್ತೆ ತುಮಕೂರು ಆ.29
ತುಮಕೂರಿನ ವಿನೋಬನಗರದ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಮುಂಭಾಗದಲ್ಲಿರುವ ಪಾರ್ಕ್ನಲ್ಲಿ ಕಸ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕರವೇ ಜಿಲ್ಲಾಧ್ಯಕ್ಷ ವಿಷ್ಣುವರ್ಧನ್ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುವರ್ಧನ್, ಅಭಿವೃದ್ಧಿ ಕಾರ್ಯಗಳು ಸುಮಾರು 3 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿವೆ. ಸುಮಾರು 2 ತಿಂಗಳಿಂದ ಬಹುತೇಕ ವಾರ್ಡ್ಗಳ ಚರಂಡಿಯ ಕಸವನ್ನು ತಂದು ಪಾರ್ಕಿನಲ್ಲಿ ಗುಡ್ಡೆ ಮಾಡಿರುವುದರಿಂದ ಪಾರ್ಕಿನಲ್ಲಿ ಗಲೀಜು ನೀರು ಶೇಖರಣೆಯಾಗಿ ದುರ್ವಾಸನೆ ಬರುತ್ತಿದೆ.
ಪಾರ್ಕಿನಲ್ಲಿ ಕಸ ಹಾಕುತ್ತಿರುವುದರಿಂದ ಸುತ್ತ-ಮುತ್ತಲಿನ ಮನೆಗಳಲ್ಲಿ ವಾಸಿಸುವವರಿಗೆ ಅಸಹನೀಯವಾಗಿದೆ. ಸೊಳ್ಳೆಗಳು ಹಾಗೂ ವಿಚಿತ್ರ ಹುಳುಗಳು ಕಾಣಿಸಿಕೊಂಡಿವೆ. ವಿವಿಧ ರೀತಿಯ ಚರ್ಮಮ ರೋಗ, ಜ್ವರ ಮುಂತಾದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಸಾರ್ವಜನಿಕರು ಹಲವು ಬಾರಿ ನಗರಸಭೆಗೆ ದೂರು ನೀಡಿದಾಗ್ಯೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲವೆಂದು ದೂರಿದರು.
ನಗರಸಭೆಯ ಆಡಳಿತಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, 3 ವರ್ಷಗಳಿಂದ ನಿಧಾನಗತಿಯಲ್ಲಿ ನಡೆಯುತ್ತಿರುವ ಪಾರ್ಕಿನ ಅಭಿವೃದ್ಧಿ ಕಾರ್ಯವನ್ನು ಅತಿ ಜರೂರಾಗಿ ಪೂರ್ಣಗೊಳಿಸಕು. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಉದ್ಯಾನವನದಲ್ಲಿ ನಿರ್ಲಕ್ಷ್ಯ ಧೋರಣೆಯೊಂದಿಗೆ ಕಸವನ್ನು ಸಂಗ್ರಹಣೆ ಮಾಡಿರುವುದನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕೆಂದು ಒತ್ತಾಯಿಸಿದರು.
ಕ.ರ.ವೇ. ಜಿಲ್ಲಾಧ್ಯಕ್ಷರಾದ ಎನ್.ಎಸ್. ವಿಷ್ಣುವರ್ಧನ, ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಮೂರ್ತಿ, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಅಕ್ಷಯ್ ಚೌಧರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೋಹನ್ ಕುಮಾರ್ ಜಿ.ಆರ್., ಜಿಲ್ಲಾ ಉಪಾಧ್ಯಕ್ಷರಾದ ಟಿ.ಎಲ್. ದೀಪಕ್, ತುಮಕೂರು ತಾಲ್ಲೂಕು ಅಧ್ಯಕ್ಷರಾದ ಸತೀಶ್ ಕುಮಾರ್ ಡಿ.ಎನ್., ಗ್ರಾಮಾಂತರ ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ರಾಜೇಶ್ ಜಿ.ಎಲ್., ತುಮಕೂರು ನಗರ ಮಹಿಳಾ ಘಟಕದ ಅಧ್ಯಕ್ಷರಾದ ರಾಜೇಶ್ವರಿ ಚಂದ್ರಶೇಖರ್, ಮಹಿಳಾ ಘಟಕದ ಗೌರವಾಧ್ಯಕ್ಷರಾದ ಜಯಸುಧಾ ಹಾಗೂ ಕ.ರ.ವೇ. ಮುಖಂಡರಾದ ಮಂಜುನಾಥ್, ಡಿ.ಟಿ. ರಾಜೇಶ್ ,ಎಸ್. ಮಹೇಶ್, ಜಿ. ಯೋಗೀಶ್ ಆರ್ಮುಗಂ, ಶಿವರಾಜು ಇತತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

