ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಪಣ ತೊಡಿ
ತಿಪಟೂರು: ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮಹರಿಸಿ ಉತ್ತಮ ವಿದ್ಯಾಭ್ಯಾಸ ಪಡೆದು ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಪಣತೊಡಬೇಕೆಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.
ನಗರದ ಗುರುಕುಲ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಬಾಲ್ಯ ವಿವಾಹ
ತಡೆಗಟ್ಟುವ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೆಣ್ಣುಮಕ್ಕಳ ಕನಿಷ್ಠ ವಯಸ್ಸು 18ವರ್ಷ ಹಾಗೂ ಗಂಡು ಮಕ್ಕಳ ಕನಿಷ್ಠ ವಯಸ್ಸು 21ಇರಬೇಕು. ಈ ವಯೋವುತಿಯೊಳಗೆ ವಿವಾಹ ಮಾಡಿದರೆ ಅದು ಕಾನೂನು ಮೂಲಕ ಶಿಕ್ಷಾರ್ಹ ಅಪರಾಧವಾಗುತ್ತದೆ.
ಇಂತಹ ಘಟನೆಗಳು ಕಂಡುಬಂದಲ್ಲಿ ಕೂಡಲೆ ತಿಳಿಸಬೇಕು. ವಿದ್ಯಾರ್ಥಿಗಳಾದ ನೀವು ಈಗಿನಿಂದಲೇ ಈ ಪಿಡುಗಿನ ವಿರುದ್ಧ ಹೋರಾಟ ಮಾಡುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ಸೃಷ್ಟಿಸಬೇಕೆಂದರು.
ಕಾರ್ಮಿಕ ಅಧಿಕಾರಿ ಧರ್ಮಪ್ಪ ಮಾತನಾಡಿ ಕಾರ್ಮಿಕ ಶೋಷಣೆಯು ಅಪರಾಧವಾಗಿದ್ದು, ಬಾಲಕಾರ್ಮಿಕರು ಕಂಡುಬಂದಲ್ಲಿ 1098 ಈ ದೂರವಾಣಿಗೆ ಕರೆ ಮಾಡಬೇಕೆಂದರಲ್ಲದೆ ಬಾಲ್ಯವಿವಾಹಕ್ಕೆ ಜನರಲ್ಲಿರುವ ಅನಕ್ಷರತೆ, ಮೂಡನಂಬಿಕೆ ಮುಖ್ಯ ಕಾರಣವಾಗಿದೆ. ಎಲ್ಲರೂ ಶಿಕ್ಷಣ ಪಡೆದಲ್ಲಿ ಇಂತಹ ಪಿಡುಗನ್ನು ನಿರ್ಮೂಲನೆ ಮಾಡಬಹುದು ಎಂದರು.
ಶಿಕ್ಷಣ ಇಲಾಖೆಯ ಸಂಪನ್ಮೂಲಾಧಿಕಾರಿ ಕೋಡಚಾರ್ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಪ್ರೇಮ ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಪ್ರತಿಜ್ಞಾವಿಧಿಯನ್ನು ಮಕ್ಕಳಿಗೆ ಬೋಧಿಸಿದರು.ಮುಖ್ಯೋಪಾಧ್ಯಾಯ ಎಸ್. ಚನ್ನಬಸವಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬಾಲ್ಯವಿವಾಹ ಕಾಯ್ದೆಯ ಎಲ್ಲಾ ನಿಯಮ ಅನುಸರಿಸಿ ತಮ್ಮ ಜೀವನವನ್ನು ಹಸನುಗೊಳಿಸಿಕೊಳ್ಳಬೇಕೆಂದು ಕರೆ ನೀಡಿದರು. ಮುಖ್ಯೋಪಾಧ್ಯಾಯಿನಿ ಪದ್ಮಾವತಿ ಜಯಂತ್ ಮತ್ತಿತರರಿದ್ದರು. ಶಿಕ್ಷಕ ಎಸ್. ಈಶ್ವರಯ್ಯ ನಿರೂಪಿಸಿ, ರಾಜಶೇಖರಯ್ಯ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

